ಮೈಸೂರು

ತಾಪಮಾನ ಏರಿಕೆ ಹಿನ್ನಲೆ| ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ: ಡಾ.ಕುಮಾರಸ್ವಾಮಿ

ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ
ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್‌.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚು ಬಿಸಿಲಿನ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಟ ಕಡಿಮೆ ಮಾಡಬೇಕು. ದೇಹದ ನಿರ್ಜಲೀಕರಣ ಆಗದಂತೆ ಗಮನವಹಿಸಬೇಕು. ಜೊತೆಗೆ ಉಷ್ಣಾಂಶ ಹೆಚ್ಚಾದಾಗ ಕೆಲವು ತೊಂದರೆಗಳು ಆಗುತ್ತವೆ ಎಂದರು.

ನಮ್ಮ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗಳಿಗೆ ಬೇಸಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೇ ದೇಹ ನಿರ್ಜಲೀಕರಣವಾದಾಗ ಮನೆಯಲ್ಲೇ ಓಆರ್‌ಎಸ್ ದ್ರಾವಣ ಹೇಗೆ ತಯಾರಿಸಬೇಕು ಎಂಬುದನ್ನು ಸಹ ಆಶಾ ಕಾರ್ಯಕರ್ತೆಯರು ಹೇಳಿಕೊಡುತ್ತಾರೆ. ಹೀಗಾಗಿ ಈ ನಿಟ್ಟಿನಲ್ಲಿ ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ಹೇಳಿದರು.

ಇನ್ನು ಸಾರ್ವಜನಿಕರು ಸಾಧ್ಯವಾದಷ್ಟು ನೀರು, ತಂಪು ಪಾನೀಯಗಳ ಸೇವಿಸಬೇಕು, ಮಾಂಸಹಾರ ಕಡಿಮೆ ಮಾಡಿ ಸಸ್ಯಹಾರವನ್ನೇ ಹೆಚ್ಚು ಬಳಸಬೇಕು. ರೈತರು ಹೊಲ ಗದ್ದೆಗಳಲ್ಲಿ ದುಡಿಯುವವರು ಮುಂಜಾನೆ ಹೋಗಿ 10.30,11 ಗಂಟೆ ಸಮಯಕ್ಕೆ ಮನೆಗೆ ಬಂದು ವಿರಮಿಸಬೇಕು. ಬಿಸಿಲ ತಾಪದಲ್ಲಿ ಕೆಲಸ ಮಾಡುವುದನ್ನು ಆದಷ್ಟು ಕಡಿಮೆ ಮಾಡಬೇಕು. ಬೇಸಿಗೆ ನಿರ್ವಹಣೆಗೆ ನಾವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ. ಹಾಗಾಗಿ ಕೈಪಿಡಿಗಳು ಮತ್ತು ಪೋಸ್ಟರ್‌ಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ. ಅದರೊಂದಿಗೆ ಜಿಲ್ಲಾ ಮಟ್ಟದಲ್ಲೂ ವೈದ್ಯರಿಗೆ ಬೇಸಿಗೆ ಸಂಧರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಪ್ರತ್ಯೇಕ ಸಭೆ ಮಾಡಿ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

3 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

3 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

3 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

5 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

7 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

13 hours ago