ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸುತ್ತಿದ್ದು, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ. ಅನೇಕ ಏಳು ಬೀಳು, ವಿರೋಧ ಪಕ್ಷಗಳ ವಿರೋಧದ ನಡುವೆಯೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು, ರಾಜ್ಯದ ೭ ಕೋಟಿ ಜನತೆ ಐದು ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಗ್ಯಾರಂಟಿಗಳನ್ನು ವಿರೋಧಿಸಿದ್ದವರೇ ಇಂದು ಬೇರೆ ರಾಜ್ಯಗಳಲ್ಲಿ ಅನುಷ್ಠಾನ ಮಾಡುತ್ತಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ೭ ಕೋಟಿ ಜನತೆಯ ಬೆಳಕಾಗಿವೆ. ಮಹಿಳೆಯರಿಗೆ ಗ್ಯಾರಂಟಿಗಳು ಎರಡನೆಯ ಸ್ವಾತಂತ್ರ್ಯ ತಂದುಕೊಟ್ಟಿವೆ. ಶಕ್ತಿ ಯೋಜನೆಯಿಂದ ಯಾವುದೇ ನಿರ್ಬಂಧ ಇಲ್ಲದೆ ಎಲ್ಲೆಡೆ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಅನ್ನಭಾಗ್ಯದಿಂದ ಕೋಟ್ಯಂತರ ಮಂದಿಯ ಹಸಿವು ನೀಗಿದೆ. ಗೃಹಜ್ಯೋತಿ ಪ್ರತಿ ಮನೆಯನ್ನೂ ಬೆಳಗುತ್ತಿದೆ. ಯುವನಿಧಿ ನಿರುದ್ಯೋಗಿ ಯುವಕರಿಗೆ ಆಶಾಕಿರಣವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಪಂಚ ಗ್ಯಾರಂಟಿಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಧಕಾರಿಗಳ ಪಾತ್ರವೂ ಬಹಳ ದೊಡ್ಡದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಅರುಣ್ ಕುಮಾರ್, ಉಪಾಧ್ಯಕ್ಷರಾದ ಕೆ.ಸಿ.ಶಿವಕುಮಾರ್, ಬಸವಣ್ಣ, ನಿರ್ದೇಶಕ ಶ್ಯಾಮ ಯೋಗೇಶ್ ಹಾಜರಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…