ನಂಜನಗೂಡು: ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಆಕಾಡೆಮಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಗೆ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ಅವರು ಪಾತ್ರರಾಗಿದ್ದಾರೆ.
ತಮಿಳುನಾಡಿನ ಹೊಸೂರು ಪಟ್ಟಣದ ಖಾಸಗಿ ಹೋಟೆಲ್ ವೊಂದರಲ್ಲಿ ಅಂತರಾಷ್ಟ್ರೀಯ ಸಾಧನೆಯ ಪ್ರಶಸ್ತಿಗಳು, ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಅಕಾಡೆಮಿ ವತಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ನಂಜನಗೂಡಿನಲ್ಲಿ ಆಟೋ ಅಮ್ಮ ಎಂದೇ ಖ್ಯಾತಿ ಪಡೆದಿರುವ ಡಾ.ಸರಸ್ವತಿ ಚಂದ್ರಶೇಖರ್ ರವರ 15 ವರ್ಷಗಳ ಸಾಮಾಜಿಕ ಸೇವೆ ಗುರುತಿಸಿ ಮೈಸೂರು, ಕರ್ನಾಟಕ, ಇಂಡಿಯಾ ರಿಯಾಲಿಟಿ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಅಕಾಡೆಮಿ ವಿಶ್ವ ದಾಖಲೆ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಿ, ಸಮಾಜ ಸೇವೆಯಲ್ಲಿ ತೊಡಗಿರುವ ಡಾ. ಸರಸ್ವತಿ ಚಂದ್ರಶೇಖರ್ ರವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಚೇರ್ಮನ್ ಡಾ. ರಾಬರ್ಟ್ ರೋಮ್ಯಾನುಯೆಲ್ ಹೇರ್‌ಮ್ಯಾನ್, ಆಕಾಡೆಮಿಯ ಅಧ್ಯಕ್ಷ ಡಾ.ಎ.ಪಿ.ಶ್ರೀನಾಥ್, ಇಂಟರ್ ನ್ಯಾಷನಲ್ ತಾಂತ್ರಿಕ ಅಧಿಕಾರಿ ಶ್ರೀ.ಅನಾಥನ್ ಕುಪುಸಾಮಿ, ನಿರ್ದೇಶಕ
ಡಾ.ಆರ್.ಸೆಲ್ವಂ, ಉಪಾಧ್ಯಕ್ಷ ಅರ್ಜುನ್ ಸೇರಿದಂತೆ ಹಲವರು ಹಾಜರಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…