ಮೈಸೂರು

ದ್ರಾವಿಡ ಭಾಷೆಗಳನ್ನು ಸಹೋದರತ್ವದಿಂದ ನೋಡಿ ; ವೈದ್ಯ ಶರತ್‌

ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು.

ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಮೇಘ ಮೈತ್ರಿ ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕನ್ನಡವು ದ್ರಾವಿಡ ಭಾಷೆಯಾಗಿದ್ದರೂ ಸಂಸ್ಕೃತ ಮತ್ತು ಇತರೆ ಭಾರತೀಯ ಭಾಷೆಗಳಿಂದಲೂ ಪ್ರಭಾವಿತವಾಗಿದೆ. ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದರು.

ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ. ತಮಿಳು ಸಾಹಿತ್ಯದ ಉಳಿದಿರುವ ಸಂಗ್ರಹವು ಅದರ ಕನ್ನಡ ಪ್ರತಿರೂಪಕ್ಕಿಂತ ಹಳೆಯದಾಗಿರಬಹುದು. ಆದಾಗ್ಯೂ ಇದರ ಅರ್ಥ ತಮಿಳು ಕನ್ನಡಕ್ಕಿಂತ ಹಳೆಯ ಭಾಷೆ ಎಂದು ಅರ್ಥವಲ್ಲ ಎಂದು ಹೇಳಿದರು.

ಸಾಹಿತಿ ಟಿ.ಸತೀಶ್ ಜವರೇಗೌಡ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರು ಹಡವನಹಳ್ಳಿ ವೀರಣ್ಣಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡಿದರು.

ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಹೋರಾಟಗಾರ ಕುರುಬಾರಹಳ್ಳಿ ಧನಪಾಲ್ ಮೆರವಣಿಗೆಗೆ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ವಿಜಯಕುಮಾರ ಎಸ್.ಕಟಗಿಹಳ್ಳಿಮಠ ನೂತನ ಅಧ್ಯಕ್ಷ ಡಾ.ಸಿ.ಶರತ್‌ಕುಮಾರ್ ಅವರಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು. ಸಮಾಜ ಸೇವಕರಾದ ಡಾ.ಶಕುಂತಲಾ ಜಯದೇವ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago