ನಂಜನಗೂಡು: ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ.
ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ.
ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಕಪಿಲಾ ನದಿಯಿಂದ ನೀರು ಪೂರೈಸಲಾಗುತ್ತಿದೆ.
ಕಳೆದ ಒಂದೂವರೆ ವರ್ಷದಿಂದ ದುರಸ್ತಿ ನೆಪದಲ್ಲಿ ಘಟಕ ಸ್ಥಗಿತಗೊಂಡಿದ್ದು, ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಲ್ಲಹಳ್ಳಿ ಸಮೀಪ ಕಪಿಲಾ ನದಿಯಿಂದ 250 ಅಶ್ವಶಕ್ತಿಯ ಮೋಟಾರ್‌ಗಳಿಂದ ನೀರೆತ್ತಿ ಮಾದಾಪುರದಿಂದ ಶುದ್ಧೀಕರಿಸಿ, 288 ಕಿಮೀ ಕುಡಿಯುವ ನೀರಿನ ಮಾರ್ಗದ ಮೂಲಕ 123 ಹಳ್ಳಿಗಳಿಗೆ ನೀರು ಪೂರೈಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನತೆ ಕುಡಿಯುವ ನೀರಿಗಾಗಿ ಜನತೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…