ಮೈಸೂರು

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಅರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು ಮತ್ತು ಏಳನೆಯ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ ಜಾನುವಾರು ಸಾಕಷ್ಟು ಪರಿ ತಪ್ಪಿಸಿದರು ಕೂಡ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಡಿಯುವ ನೀರು ಕಲ್ಪಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸಾಕಷ್ಟು ಬಾರಿ ಗ್ರಾಮಸ್ಥರು ಮನವಿಯನ್ನು ಮಾಡಿದ್ದಾರೆ. ಗ್ರಾಮದ ಮುಂಭಾಗದಲ್ಲೇ ಕಪಿಲಾ ನದಿ ಹಾದು ಹೋಗಿದ್ದರೂ ಕೂಡ ಬೇಸಿಗೆಗೂ ಮುನ್ನ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಹುಲ್ಲಹಳ್ಳಿ ಗ್ರಾಮಸ್ಥರನ್ನು ರೊಚ್ಚಿಗೇಳಿಸಿದೆ.

ಎಷ್ಟೇ ಮನವಿ ಮಾಡಿದರು ಸ್ಪಂದಿಸದ ಪಿಡಿಒ ಮತ್ತು ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಒಳಗೆ ಯಾರೂ ಕೂಡ ಪ್ರವೇಶ ಮಾಡದಂತೆ ದಿಗ್ಬಂದನ ವಿಧಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

9 mins ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

24 mins ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

46 mins ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

56 mins ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

1 hour ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

2 hours ago