ಮೈಸೂರು : ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಲಿದ್ದಾರೆ. ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮಗಳು ನೆರವೇರಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…