ಮೈಸೂರು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಪಲ್ಟಿ: ಹಲವರಿಗೆ ಗಂಭೀರ ಗಾಯ

ಸರಗೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ಪಟ್ಟಣದ ಬಳಿ ನಡೆದಿದೆ.

ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸಿ ವಾಹನ ಕಬಿನಿ ನದಿ ಚಾನೆಲ್‌ ಬಳಿ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸೇರಿ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೆಚ್.ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಸರಗೂರು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

1 hour ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

3 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

7 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

7 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

7 hours ago