ಹೆಚ್.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ.
ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.
ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಇನ್ನು ಎರಡು ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಈ ಕುರಿತು ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…