ಮೈಸೂರು

ಚಾಲಕನಿಗೆ ಹೃದಯಘಾತ| ಪಾದಚಾರಿ ಮಹಿಳೆಗೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಹೆಚ್‌.ಡಿ ಕೋಟೆ: ತಾಲೂಕಿನ ದಮ್ಮನಕಟ್ಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ.

ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.

ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಇನ್ನು ಎರಡು ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಈ ಕುರಿತು ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago