ಮೈಸೂರು

ದಸರಾ ದೀಪಾಲಂಕಾರಕ್ಕೆ ಡ್ರೋನ್ ಶೋ ಮೆರಗು

1500 ಡ್ರೋನ್‌ ಬಳಸಿ ಆಗಸದಲ್ಲಿ ಅದ್ಭುತ ವಿನ್ಯಾಸ ನಿರ್ಮಾಣ – ದಸರಾ ದೀಪಾಲಂಕಾರದ ಪೋಸ್ಟರ್ ಬಿಡುಗೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದರು.

“ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನದಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್‌ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ. ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆದೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ. ದಸರಾ ದೀಪಾಲಂಕಾರಕ್ಕಾಗಿ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ. ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 242012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

ಡ್ರೋನ್‌ ಶೋ ಆಕರ್ಷಣೆ
“ದಸರಾ ದೀಪಾಲಂಕಾರದೊಂದಿಗೆ ಇದೇ ಮೊದಲ ಬಾರಿಗೆ ಡ್ರೋನ್‌ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅಕ್ಟೋಬರ್‌ 6, 7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡ್ರೋನ್‌ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ” ಎಂದರು.

ವಿದ್ಯುತ್‌ ರಥ ಸಂಚಾರ
ದಸರಾ 2024ರ ಸಂದರ್ಭದಲ್ಲಿ “ಪವರ್‌ ಮ್ಯಾನ್‌”ಗಳ ಕರ್ತವ್ಯಗಳು, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್ ಪಂಪ್ ಸೆಟ್ ಗಳು, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗುವುದು. ಈ ರಥ ಅ.3ರಂದು ಉದ್ಘಾಟನೆಗೊಳ್ಳಲಿದ್ದು, ದಸರಾ ನವರಾತ್ರಿಯ 10 ದಿನಗಳ ಕಾಲ ಮೈಸೂರಿನ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪ್ರದರ್ಶಿಸಲಾಗುವುದು” ಎಂದು ಸಚಿವರು ವಿವರಿಸಿದರು.

ನಿಗಮದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, “ದಸರಾ ದೀಪಾಲಂಕಾರದ ಜತೆಗೆ ಈ ಬಾರಿ ಡ್ರೋನ್‌ ಪ್ರದರ್ಶನ ನಡೆಸಲಾಗುತ್ತಿದೆ. ವಾರಣಾಸಿ, ಹರಿದ್ವಾರಗಳಲ್ಲಿ ಡ್ರೋನ್‌ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ್ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು. ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, ಸೆಸ್ಕ್‌ ಹಣಕಾಸು ನಿರ್ದೇಶಕರಾದ ಶೇಖ್ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

4 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

16 hours ago