ಮೈಸೂರು

ಮೈಸೂರಲ್ಲಿ ಡ್ರಗ್ಸ್‌ ತಯಾರಕ ಘಟಕ ಪತ್ತೆ ಪ್ರಕರಣ : ಸರ್ಕಲ್‌ ಇನ್ಸ್‌ಪೆಕ್ಟರ್‌ ಅಮಾನತ್ತು

ಮೈಸೂರು : ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನ ಅಮಾನತ್ತುಪಡಿಸಲಾಗಿದೆ.

ಮೈಸೂರಿನಲ್ಲಿ ಇಂತಹ ಬೃಹತ್ ಜಾಲ ಕಾರ್ಯಾಚರಣೆ ನಡೆಸುತ್ತಿದ್ದರೂ ಸ್ಥಳೀಯ ಪೊಲೀಸರಿಗೆ ಮಾಹಿತಿ ಏಕೆ ಸಿಕ್ಕಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂದ ಕರ್ತವ್ಯ ಲೋಪದ ಅಡಿಯಲ್ಲಿ ಠಾಣಾಧಿಕಾರಿ ಲಕ್ಷಿ ಕಾಂತ ತಳವಾರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತು ಮಾಡಿದ್ದಾರೆ.

ಸದರಿ ಸ್ಥಳಕ್ಕೆ ಸಿಸಿಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ಅವರನ್ನ ಪ್ರಭಾರ ಆಗಿ ನೇಮಕ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

3 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

5 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

5 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

6 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

6 hours ago