ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಮಾದಕ ವಸ್ತು ಘಟಕದ ಮೇಲೆ ಮಹಾರಾಷ್ಟ್ರ ಹಾಗೂ ಮೈಸೂರು ನಗರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಕೆಜಿಗೂ ಹೆಚ್ಚು ಎಂಡಿಎಂಎ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ಬೆಲೆಯ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಮೈಸೂರಿನಲ್ಲಿ ಸಿಕ್ಕ ಮಾದಕ ವಸ್ತು ಎಂಡಿಎಂಎ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಹಾರಾಷ್ಟ್ರ ಸೇರಿ ದೇಶ ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲವತ್ತ ಗ್ರಾಮದ ಬಳಿ ಗ್ಯಾರೇಜ್‌ವೊಂದರಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಇಬ್ಬರು ಸ್ಥಳೀಯರು, ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ದೊರೆತಿರಲಿಲ್ಲವೆಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…