ಮೈಸೂರು

ವರುಣನ ಆರ್ಭಟಕ್ಕೆ ನಾಟಿ ಗದ್ದೆಗಳು ಮುಳುಗಡೆ ; ಗ್ರಾಮದ ಮುಖ್ಯರಸ್ತೆಯೂ ಜಲಾವೃತ

ನಂಜನಗೂಡು : ವರುಣನ ಆರ್ಭಟಕ್ಕೆ ನಾಟಿ ಮಾಡಿದ್ದ ಗದ್ದೆಗಳು ಹಾಗೂ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿರುವುದು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಂಡ್ಲುಪೇಟೆ-ಊಟಿ ಮುಖ್ಯರಸ್ತೆಯ ಬದಿಯಲ್ಲಿದ್ದ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಫಸಲು ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಸಹಳ್ಳಿ ಗ್ರಾಮದ ಬಳಿ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದ್ದು, ಇದರಿಂದ ಕಬಿನಿ ಬಲದಂಡೆ ನಾಲೆಯ 24ನೇ ಗೇಟ್ ಇಂದ ಬರುತ್ತಿರುವ ನೀರು ಮತ್ತು ಮಳೆ ನೀರು ಜೊತೆಗೂಡಿ ಇಷ್ಟೆಲ್ಲ ಅವಾಂತರಗಳಿಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಇದನ್ನು ಓದಿ : ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ನೀರು ಹರಿಯುತ್ತಿದ್ದು ಇದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆಯು ಜಲಾವೃತವಾಗಿರುವುದರಿಂದ ಗ್ರಾಮಸ್ಥರು ಸಂಚರಿಸಲು ತುಂಬಾ ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ನೀರು ಸರಾಗವಾಗಿ ಹರಿದು ಹೋಗುವಂತೆ ಕಾಮಗಾರಿಯನ್ನು ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಗ್ರಾಮದ ರೈತರಾದ ಮೂರ್ತಿ, ಗಿರೀಶ್, ಚೆನ್ನಯ್ಯ, ಸಿದ್ದು, ಆಟೋ ರವಿ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

17 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

27 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

34 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

51 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago