ಮೈಸೂರು : ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪನವರು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡುವರು. ದಸರಾ-2023 ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕ ಬಿಡುಗಡೆಯನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆಯವರು ನೆರವೇರಿಸಲಿದ್ದು, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಪಶುಸಂಗೋಪನೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರ ಘನ ಉಪಸ್ಥಿತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕಾರ್ಯಕ್ರಮದಲ್ಲಿ ವಿಧಾನಸಭೆಯ ಶಾಸಕರಾದ ತನ್ವೀರ್ ಸೇಠ್, ಜಿ ಟಿ ದೇವೇಗೌಡ, ಅನಿಲ್ ಕುಮಾರ್ ಸಿ, ರವಿಶಂಕರ್ ಡಿ, ದರ್ಶನ್ ಧ್ರುವನಾರಾಯಣ್, ಟಿ.ಎಸ್ ಶ್ರೀವತ್ಸ, ಕೆ ಹರೀಶ್ ಗೌಡ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮರೆತಿಬ್ಬೇಗೌಡ, ಅಡಗೂರು ಹೆಚ್ ವಿಶ್ವನಾಥ್, ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ ಮಧು ಜಿ ಮಾದೇಗೌಡ ಹಾಗೂ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಅಂಬಿಕಾ ಲೋಕೇಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…