Mysore
20
scattered clouds

Social Media

ಸೋಮವಾರ, 26 ಜನವರಿ 2026
Light
Dark

ದಸರಾ ಉದ್ಘಾಟನೆ | ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

Dussehra inauguration

ಮೈಸೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕರ್ನಾಟಕದ ಪ್ರಸಿದ್ಧ ಸಾಹಿತಿಗಳು ಹಾಗೂ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು.

ಇದನ್ನೂ ಓದಿ: ಗುಂಡ್ಲುಪೇಟೆ: ಲಾರಿಯನ್ನೇ ಅಡ್ಡ ಹಾಕಿದ ಗಜರಾಜ

ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಿದರು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಇದ್ದರು.

Tags:
error: Content is protected !!