ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ.
ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ ನೋಂದಣಿ ಪ್ರಾರಂಭವಾಗಿದ್ದು, ಉದ್ಯೋಗ ಚೀಟಿ ಹೊಂದಿರುವ ಕುಟುಂಬದವರು ಅಗತ್ಯ ದಾಖಲಾತಿಯೊಂದಿಗೆ ಅಪ್ಡೇಟ್ ಮಾಡಿಸಬಹುದಾಗಿದೆ.
ಇದನ್ನು ಓದಿ : ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರ ಹಾಜರಾತಿಯನ್ನು ಎನ್.ಎಂ.ಎಂ.ಎಸ್ ಮೂಲಕ ತೆಗೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇ-ಕೆವೈಸಿ ಅಪ್ಡೇಟ್ ಅಗತ್ಯವಿರುತ್ತದೆ.
ಕೂಲಿಕಾರ್ಮಿಕರ ಹಾಜರಾತಿಯನ್ನು ತೆಗೆದುಕೊಳ್ಳುವಾಗ ಹಾಗೂ ಹಣವನ್ನು ಅವರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಿಸುವುದು ಸಹಕಾರಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




