ಮೈಸೂರು

ಮನರೇಗಾ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ: ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ

ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ.

ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ ನೋಂದಣಿ ಪ್ರಾರಂಭವಾಗಿದ್ದು, ಉದ್ಯೋಗ ಚೀಟಿ ಹೊಂದಿರುವ ಕುಟುಂಬದವರು ಅಗತ್ಯ ದಾಖಲಾತಿಯೊಂದಿಗೆ ಅಪ್ಡೇಟ್ ಮಾಡಿಸಬಹುದಾಗಿದೆ.

ಇದನ್ನು ಓದಿ : ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ಕೂಲಿಕಾರರ ಹಾಜರಾತಿಯನ್ನು ಎನ್.ಎಂ.ಎಂ.ಎಸ್ ಮೂಲಕ ತೆಗೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇ-ಕೆವೈಸಿ ಅಪ್ಡೇಟ್ ಅಗತ್ಯವಿರುತ್ತದೆ.

ಕೂಲಿಕಾರ್ಮಿಕರ ಹಾಜರಾತಿಯನ್ನು ತೆಗೆದುಕೊಳ್ಳುವಾಗ ಹಾಗೂ ಹಣವನ್ನು ಅವರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಿಸುವುದು ಸಹಕಾರಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago