ಮೈಸೂರು

ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ: ಶಾಸಕ ಜಿಟಿಡಿ

ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಬೋಗಾದಿ ರಿಂಗ್ ರಸ್ತೆಯ ಜಿ.ಎಲ್.ಎನ್.ಕನ್‌ವೆನ್ಷನ್ ಹಾಲ್‌ನಲ್ಲಿ ಆಯೋಜಸಿದ್ದ ಶ್ರೀ ಶಾರದ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಸ್ಮರಣ ಸಂಚಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ೨೫ ವರ್ಷಗಳಲ್ಲಿ ಎರಡೂವರೆ ಸಾವಿರ ಸದಸ್ಯರನ್ನು ನೋಂದಾಯಿಸಿ ಆದಾಯ ಮತ್ತು ಪ್ರಗತಿ ಸಾಧಿಸಿರುವುದು ಶ್ಲಾಘನೀಯ. ನಿರ್ದೇಶಕರು ಬ್ಯಾಂಕಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರಿಂದಾಗಿ ಸಂಘ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ,ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.ಸಹಕಾರ ಕ್ಷೇತ್ರದ ಬ್ಯಾಂಕ್,ಸಂಘಗಳುಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರಿಗೆ ಸಾಲಸೌಲಭ್ಯ ನೀಡಲು ಅನುಕೂಲವಾಗಲಿದೆ ಎಂದರು. ಸರ್ಕಾರಿ ಬ್ಯಾಂಕ್‌ಗಳಿಂದ ತರಕಾರಿ,ಹಣ್ಣು ವ್ಯಾಪಾರ ಮಾಡುವವರು, ಗುಡಿ ಕೈಗಾರಿಕೆಗಳನ್ನು ಮಾಡುವವರಿಗೆ ಸಾಲ ಸೌಲಭ್ಯ ನೀಡುವುದಿಲ್ಲ. ಅಂತಹವರನ್ನು ಸದಸ್ಯರನ್ನಾಗಿ ಮಾಡಿಕೊಂಡು ಸಾಲಸೌಲಭ್ಯ ನೀಡಿದರೆ ಅವರ ಆರ್ಥಿಕ ಪ್ರಗತಿಗೆ ಅನುಕೂಲವಾಗಲಿದೆ.

ಖಾಸಗಿ ಸಾಲದಿಂದ ಬಂಡವಾಳ ಹಾಕಿಸದೆ ಸಹಕಾರ ಸಂಘಗಳಿಂದ ಸಾಲ ಕೊಟ್ಟರೆ ಆರ್ಥಿಕವಾಗಿ ನೆರವಾಗಲಿದೆ ಎಂದರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಸಾಲ ಕೊಡಲಾಗುತ್ತಿಲ್ಲ. ಕೇಂದ್ರಸರ್ಕಾರವಾಗಲೀ ಅಥವಾ ರಾಜ್ಯಸರ್ಕಾರವಾಗಲೀ ಸಹಕಾರ ಸಂಘಗಳಿಗೆ ಅನುದಾನ ಕೊಡುತ್ತಿಲ್ಲ. ಶೇ.೩ರಷ್ಟು ಬಡ್ಡಿದರದಲ್ಲಿ ಸಾಲ ಕೊಡಬಹುದು ಹೊರತು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಸಹಕಾರ ಕ್ಷೇತ್ರ ನಮ್ಮದೆಂದು ಸರ್ಕಾರ ಹೇಳಿಕೊಳ್ಳುತ್ತಿದೆಯೇ ಹೊರತು ಅನುದಾನ ಕೊಡಲು ಮುಂದಾಗುತ್ತಿಲ್ಲ ಎಂದು ಬೇಸರಿಸಿದರು.

ನನ್ನ ಬ್ಯಾಂಕ್,ಬ್ಯಾಂಕ್‌ನ ರಜತ ಮಹೋತ್ಸವವೆಂದು ಭಾವಿಸಿ ಬಂದಿರುವುದು ಸಂತೋಷವಾಗಿದೆ. ಸಹಕಾರ ಕ್ಷೇತ್ರದಲ್ಲಿ ಮಾಡಿಕೊಂಡು ಬಂದಿರುವ ಕೆಲಸ,ಅನುಭವವನ್ನು ನೋಡಿದರೆ ಸಹಕಾರ ಕ್ಷೇತ್ರ ರಾಜಕೀಯ ಮತ್ತುಸರ್ಕಾರದ ಹಸ್ತಕ್ಷೇಪದಿಂದ ದೂರವಿರಬೇಕು. ಠೇವಣಿದಾರರು ಬ್ಯಾಂಕ್,ಸಂಘದ ಮೇಲೆ ವಿಶ್ವಾಸ ಇಟ್ಟು ಠೇವಣಿ ಇಡುತ್ತಾರೆ.ಸದಸ್ಯರಿಗೆ ಕಾಲಕಾಲಕ್ಕೆ ಸೌಲಭ್ಯಗಳನ್ನು ನೀಡಿದರೆ ಮತ್ತಷ್ಟು ಪ್ರಗತಿ ಹೊಂದಬಹುದು ಎಂದರು. ಅಧ್ಯಕ್ಷತೆಯನ್ನು ಶ್ರೀಶಾರದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ವಹಿಸಿದ್ದರು.

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್,ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಉಪಾಧ್ಯಕ್ಷ ಕೆ.ವೆಂಕಟಕೃಷ್ಣ ಭಟ್,ನಿರ್ದೇಶಕರಾದ ಎಸ್.ವೆಂಕಟೇಶ್, ಟಿ.ಎನ್.ರಾಮದಾಸ್, ಎಂ.ಮಹೇಂದ್ರ,ಜೆ.ಎಸ್.ಗೋಪಾಲಕೃಷ್ಣ, ಕೆ.ಆರ್.ನಟರಾಜು, ಎಚ್.ಎಸ್.ಲಲಿತಾ ನಾಗರಾಜ್, ವೈ.ಕೆ.ರೇವತಿ, ಎಂ.ಆರ್.ಯೋಗೀಶ್, ಎಂ.ಗೋಪಾಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ.ಕೃಷ್ಣಮೂರ್ತಿ ಹಾಜರಿದ್ದರು. ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago