ಮೈಸೂರು

ಮುಡಾ ಕಚೇರಿ ಮೇಲೆ ಇಡಿ ದಾಳಿ ಅಂತ್ಯ: ಸತತ 29 ಗಂಟೆ ಶೋಧಿಸಿ ಮಹತ್ವದ ದಾಖಲೆ ಸಂಗ್ರಹಿಸಿದ ಅಧಿಕಾರಿಗಳು

ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲಿನ ಇಡಿ ದಾಳಿ ಅಂತ್ಯವಾಗಿದ್ದು, ಇಡಿ ಅಧಿಕಾರಿಗಳು ಎರಡೂ ದಿನಗಳಿಂದ ಸತತ 29 ಗಂಟೆ ಶೋಧಿಸಿ ಮಹತ್ವದ ದಾಖಲೆ ಕಲೆಹಾಕಿ ಹಾರ್ಡ್‌ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡಿದ್ದಾರೆ.

ಇಡಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ದಿನ 12 ಗಂಟೆ ಹಾಗೂ ಎರಡನೇ ದಿನ 17 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಒಟ್ಟು 29 ಗಂಟೆಗಳ ಕಾಲದ ವಿಚಾರಣೆಯಲ್ಲಿ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಆ ನಂತರ ಕೆಲ ದಾಖಲೆಗಳನ್ನು ಹಾರ್ಡ್‌ ಡಿಸ್ಕ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸಿಕೊಂಡಿದ್ದಾರೆ. ಅಲ್ಲದೇ, ಮುಡಾದಲ್ಲಿ 50:50 ಅನುಪಾತದಡಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಸಾವಿರಾರು ಪುಟಗಳ ದಾಖಲೆ ಜೊತೆಗೆ ಎರಡು ಕೆಂಪು ಬಣ್ಣದ ಬಾಕ್ಸ್‌ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಕೊಂಡು ಹೋಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

2 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

2 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

2 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

2 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

2 hours ago