ಮೈಸೂರು

ಸುರಕ್ಷಿತ ಜೀವನ ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ

ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್‌ನಲ್ಲಿ ನಡೆದ ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಲಭೂತ ಹಕ್ಕು ಆದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು ಎಂದರು.

ಬೃಹತ್ ನಗರಗಳಲ್ಲಿ, ಹೋಟೆಲ್‌ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು. ಬಾಲಕಾರ್ಮಿಕರು ಉತ್ಪಾದಿಸುವ ಪದಾರ್ಥಗಳನ್ನು ನಾವು ತೆಗೆದುಕೊಳ್ಳದಿರುವುದರಿಂದ ಪರೋಕ್ಷವಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಬಹುದು ಎಂದರು.

ಬಾಲಕಾರ್ಮಿಕ ಮಕ್ಕಳಿಗೆ ಸುರಕ್ಷಿತ ಆರೋಗ್ಯ ಜೀವನವನ್ನು ಕಟ್ಟಿಕೊಡುವ ಕೆಲಸ ಮಾಡುವಲ್ಲಿ ಪ್ರತಿಯೊಬ್ಬರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ಸಂಬoಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಡಾ. ಕೆ ವಿ ರಾಜೇಂದ್ರ ಮಾತನಾಡಿ, ವಿವಿಧ ಕಡೆಗಳಲ್ಲಿ ಬಾಲಕಾರ್ಮಿಕರು ಕಂಡುಬoದಲ್ಲಿ ಸಂಬoಧಪಟ್ಟ ಅಧಿಕಾರಿಗಳಿಗೆ ತಿಳಿಸಿ, ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕು. ಸಂವಿಧಾನದ ಆಶಯದಂತೆ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕೊಡಿಸಬೇಕು. ಮಕ್ಕಳ ದುರ್ಬಳಕೆ ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಬಹುದು ಎಂದರು.

ಬಾಲಕಾರ್ಮಿಕ ನಿರ್ಮೂಲನೆಗಾಗಿ ಪ್ರತಿಯೊಬ್ಬ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಮುಂಬರುವ ಮಕ್ಕಳ ದಿನಾಚರಣೆಯ ವೇಳೆಗೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಪಣ ತೊಡಬೇಕು ಎಂದು ಹೇಳಿದರು.

ಶಾಲೆಗೆ ಹೋಗದಿರುವ ಮಕ್ಕಳು ಸಮಾಜದಲ್ಲಿ ಯಾವುದೇ ರೀತಿಯ ಸಮಾಜ ಘಾತುಕ ಕೆಲಸವನ್ನಾದರೂ ಮಾಡಬಹುದು. ಆದ್ದರಿಂದ ಎಲ್ಲಾ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಅವರಿಗೆ ಮೂಲಭೂತ ಸೌಕರ್ಯಗಳು ದೊರಕುವಂತೆ ಮಾಡಬೇಕು. ಇದಕ್ಕೆ ಜಿಲ್ಲಾಡಳಿತದ ಜೊತೆ ಎಲ್ಲಾ ಇಲಾಖೆಗಳು ಹಾಗೂ ವಿವಿಧ ಸಂಘ-ಸoಸ್ಥೆಗಳು ಕೈ ಜೋಡಿಸಿ ಸಹಕರಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ. ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ಯೋಗದಲ್ಲಿ ತೊಡಗಿರುವುದನ್ನು ನಿಷೇಧಿಸಬೇಕು ಈ ನಿಟ್ಟಿನಲ್ಲಿ ಯಾವುದೇ ಕೆಲಸಕ್ಕೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಮೊದಲು ಮಾಲೀಕರು ಎಚ್ಚರಿಕೆ ವಹಿಸಬೇಕು. ಮಾನವನ ಜೀವನದಲ್ಲಿ ಬಾಲ್ಯಾವಸ್ಥೆ ಮತ್ತು ಶಿಕ್ಷಣ ಅತ್ಯಂತ ಪ್ರಮುಖವಾದ ಘಟ್ಟವಾಗಿದ್ದು, ಇವೆರಡೂ ಉಲ್ಲಂಘನೆಯಾಗದoತೆ ‘ಬದ್ಧತೆಯಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ’ ಮಾಡುವುದು ಈ ವರ್ಷದ ಘೋಷ ವಾಕ್ಯವಾಗಿದೆ ಎಂದರು.

1098 ಮಕ್ಕಳ ಸಹಾಯವಾಣಿಯ ಜೊತೆಗೆ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಬಹುಶಃ ಪ್ರತಿಯೊಂದು ಮಕ್ಕಳಿಗೂ ಶಿಕ್ಷಣವನ್ನು ನೀಡಿದರೆ ಬಾಲಕಾರ್ಮಿಕ ಪದ್ಧತಿಯನ್ನು ನಾಶ ಮಾಡಬಹುದು ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ಪ್ರಮಾಣ ವಚನವನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ. ಗಾಯತ್ರಿ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಯೋಗೇಶ್ ಎನ್.ಟಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ್‌ಗೌಡ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ರಜಿಯಾ ಸುಲ್ತಾನ್, ಮೈಸೂರು ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಾಜೇಶ್ ಕೆ.ಜಾದವ್, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಕುಸುಮ, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

20 mins ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

25 mins ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

37 mins ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

10 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

12 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago