ಮೈಸೂರು

ಸುರಕ್ಷಿತ ಜೀವನ ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ : ರವೀಂದ್ರ ಹೆಗಡೆ

ಮೈಸೂರು : ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್ನಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಲಭೂತ ಹಕ್ಕು ಆದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು ಎಂದರು.

ಬೃಹತ್ ನಗರಗಳಲ್ಲಿ, ಹೋಟೆಲ್ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು. ಬಾಲಕಾರ್ಮಿಕರು ಉತ್ಪಾದಿಸುವ ಪದಾರ್ಥಗಳನ್ನು ನಾವು ತೆಗೆದುಕೊಳ್ಳದಿರುವುದರಿಂದ ಪರೋಕ್ಷವಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಬಹುದು ಎಂದರು.

ಬಾಲಕಾರ್ಮಿಕ ಮಕ್ಕಳಿಗೆ ಸುರಕ್ಷಿತ ಆರೋಗ್ಯ ಜೀವನವನ್ನು ಕಟ್ಟಿಕೊಡುವ ಕೆಲಸ ಮಾಡುವಲ್ಲಿ ಪ್ರತಿಯೊಬ್ಬರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ಸಂಬoಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಬಾಲಕಾರ್ಮಿಕರು ಕಂಡುಬoದಲ್ಲಿ ಸಂಬoಧಪಟ್ಟ ಅಧಿಕಾರಿಗಳಿಗೆ ತಿಳಿಸಿ, ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕು. ಸಂವಿಧಾನದ ಆಶಯದಂತೆ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕೊಡಿಸಬೇಕು. ಮಕ್ಕಳ ದುರ್ಬಳಕೆ ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.

ಬಾಲಕಾರ್ಮಿಕ ನಿರ್ಮೂಲನೆಗಾಗಿ ಪ್ರತಿಯೊಬ್ಬ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಮುಂಬರುವ ಮಕ್ಕಳ ದಿನಾಚರಣೆಯ ವೇಳೆಗೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಪಣ ತೊಡಬೇಕು ಎಂದರು.

ಶಾಲೆಗೆ ಹೋಗದಿರುವ ಮಕ್ಕಳು ಸಮಾಜದಲ್ಲಿ ಯಾವುದೇ ರೀತಿಯ ಸಮಾಜ ಘಾತುಕ ಕೆಲಸವನ್ನಾದರೂ ಮಾಡಬಹುದು. ಆದ್ದರಿಂದ ಎಲ್ಲಾ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಅವರಿಗೆ ಮೂಲಭೂತ ಸೌಕರ್ಯಗಳು ದೊರಕುವಂತೆ ಮಾಡಬೇಕು. ಇದಕ್ಕೆ ಜಿಲ್ಲಾಡಳಿತದ ಜೊತೆ ಎಲ್ಲಾ ಇಲಾಖೆಗಳು ಹಾಗೂ ವಿವಿಧ ಸಂಘ-ಸoಸ್ಥೆಗಳು ಕೈ ಜೋಡಿಸಿ ಸಹಕರಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ. ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಿದೆ. 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ಯೋಗದಲ್ಲಿ ತೊಡಗಿರುವುದನ್ನು ನಿಷೇಧಿಸಬೇಕು ಈ ನಿಟ್ಟಿನಲ್ಲಿ ಯಾವುದೇ ಕೆಲಸಕ್ಕೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಮೊದಲು ಮಾಲೀಕರು ಎಚ್ಚರಿಕೆ ವಹಿಸಬೇಕು. ಮಾನವನ ಜೀವನದಲ್ಲಿ ಬಾಲ್ಯಾವಸ್ಥೆ ಮತ್ತು ಶಿಕ್ಷಣ ಅತ್ಯಂತ ಪ್ರಮುಖವಾದ ಘಟ್ಟವಾಗಿದ್ದು, ಇವೆರಡೂ ಉಲ್ಲಂಘನೆಯಾಗದoತೆ ‘ಬದ್ಧತೆಯಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ’ ಮಾಡುವುದು ಈ ವರ್ಷದ ಘೋಷ ವಾಕ್ಯವಾಗಿದೆ ಎಂದರು.

1098 ಮಕ್ಕಳ ಸಹಾಯವಾಣಿಯ ಜೊತೆಗೆ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಬಹುಶಃ ಪ್ರತಿಯೊಂದು ಮಕ್ಕಳಿಗೂ ಶಿಕ್ಷಣವನ್ನು ನೀಡಿದರೆ ಬಾಲಕಾರ್ಮಿಕ ಪದ್ಧತಿಯನ್ನು ನಾಶ ಮಾಡಬಹುದು ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ಪ್ರಮಾಣ ವಚನವನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ. ಗಾಯತ್ರಿ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಯೋಗೇಶ್ ಎನ್.ಟಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ್ಗೌಡ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ರಜಿಯಾ ಸುಲ್ತಾನ್, ಮೈಸೂರು ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಾಜೇಶ್ ಕೆ.ಜಾದವ್, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಕುಸುಮ, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

5 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

23 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

52 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

1 hour ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago