ಮೈಸೂರು

5 ಹುಲಿಗಳ ಸಾವಿನ ಎಫೆಕ್ಟ್: ಶವಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ.

ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಪರಿಪಾಟಲು ಪಡುವಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮ ಮಹದೇವನಗರ. ಇಲ್ಲಿ ಯಾರೇ ಮೃತಪಟ್ಟರೂ ಇದುವರೆಗೂ ಅರಣ್ಯ ಪ್ರದೇಶದಲ್ಲಿ ಶವಸಂಸ್ಕಾರ ಮಾಡಿಕೊಂಡು ಬರುತ್ತಿದ್ದರು.

ಕಾರಣ ಇಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ. ಇದೀಗ ಅರಣ್ಯ ಪ್ರದೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಯಾವುದೇ ಸ್ಥಳವಿಲ್ಲ. ಗ್ರಾಮದಲ್ಲಿ ಒಂದುಕಾಲು ಎಕರೆ ಸರ್ಕಾರಿ ಜಮೀನಿದ್ದು, ಇದನ್ನು ಸ್ಮಶಾನಕ್ಕಾಗಿ ಮೀಸಲಿಡುವಂತೆ ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್‌ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ಕೊಟ್ಟಿದ್ದರು. ಆದ್ರೆ ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ.

ಇದೀಗ ಗ್ರಾಮದಲ್ಲಿ ಸಾವು ಸಂಭವಿಸಿದ್ದು, ಮೃತದೇಹದ ಶವಸಂಸ್ಕಾರಕ್ಕೆ ಸ್ಥಳವಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದು, ಮನೆ ಮುಂದೆ ಗುಂಡಿ ತೋಡಿ ಶವ ಹೂಳಲು ನಿರ್ಧರಿಸಿದ್ದ ಜನ ಇದೀಗ ಮಹದೇವನಗರದಿಂದ 6 ಕಿಮೀ ದೂರವಿರುವ ಹೊಸವೀಡು ಗ್ರಾಮಕ್ಕೆ ಶವ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಶವಸಂಸ್ಕಾರಕ್ಕಾಗಿ ಪಕ್ಕದ ಗ್ರಾಮವನ್ನು ಅವಲಂಬಿಸಬೇಕಾದ ದುರ್ಗತಿ ಎದುರಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

37 seconds ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

15 mins ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

1 hour ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

1 hour ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

1 hour ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

2 hours ago