ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ.
ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಪರಿಪಾಟಲು ಪಡುವಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮ ಮಹದೇವನಗರ. ಇಲ್ಲಿ ಯಾರೇ ಮೃತಪಟ್ಟರೂ ಇದುವರೆಗೂ ಅರಣ್ಯ ಪ್ರದೇಶದಲ್ಲಿ ಶವಸಂಸ್ಕಾರ ಮಾಡಿಕೊಂಡು ಬರುತ್ತಿದ್ದರು.
ಕಾರಣ ಇಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ. ಇದೀಗ ಅರಣ್ಯ ಪ್ರದೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಯಾವುದೇ ಸ್ಥಳವಿಲ್ಲ. ಗ್ರಾಮದಲ್ಲಿ ಒಂದುಕಾಲು ಎಕರೆ ಸರ್ಕಾರಿ ಜಮೀನಿದ್ದು, ಇದನ್ನು ಸ್ಮಶಾನಕ್ಕಾಗಿ ಮೀಸಲಿಡುವಂತೆ ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ಕೊಟ್ಟಿದ್ದರು. ಆದ್ರೆ ಈ ಸಂಬಂಧ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ.
ಇದೀಗ ಗ್ರಾಮದಲ್ಲಿ ಸಾವು ಸಂಭವಿಸಿದ್ದು, ಮೃತದೇಹದ ಶವಸಂಸ್ಕಾರಕ್ಕೆ ಸ್ಥಳವಿಲ್ಲದೆ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕು ಆಡಳಿತದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದು, ಮನೆ ಮುಂದೆ ಗುಂಡಿ ತೋಡಿ ಶವ ಹೂಳಲು ನಿರ್ಧರಿಸಿದ್ದ ಜನ ಇದೀಗ ಮಹದೇವನಗರದಿಂದ 6 ಕಿಮೀ ದೂರವಿರುವ ಹೊಸವೀಡು ಗ್ರಾಮಕ್ಕೆ ಶವ ಕೊಂಡೊಯ್ಯಲು ನಿರ್ಧರಿಸಿದ್ದಾರೆ.
ಶವಸಂಸ್ಕಾರಕ್ಕಾಗಿ ಪಕ್ಕದ ಗ್ರಾಮವನ್ನು ಅವಲಂಬಿಸಬೇಕಾದ ದುರ್ಗತಿ ಎದುರಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…