ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ’ ಎಂಬ ಅಂತಾ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಉನ್ನತ ಶಿಕ್ಷಣ ಇಲಾಖೆ ಕೊನೆಯ ಕ್ಷಣದಲ್ಲಿ ರದ್ದುಪಡಿಸಿ ಆದೇಶ ಹೊರಡಿಸಿದ್ದರೂ ಸಂಘಟಕರು ಸರ್ಕಾರದ ಎಚ್ಚರಿಕೆಗೂ ಬಗ್ಗದೆ ಬುಧವಾರ ಶುರು ಮಾಡಿದ್ದಾರೆ.
ರಾಜ್ಯ ಸರ್ಕಾರ ನೀಡಿದ್ದ ಆದೇಶದ ಬಗ್ಗೆ ತಲೆ ಕೆಡಿಸಿಕೊಳ್ಳದ ಸಂಘಟಕರು ಸಿದ್ಧತೆ ಮಾಡಿಕೊಂಡಿದ್ದರಿಂದ ನಿರಾತಂಕವಾಗಿ ನಡೆಯುವಂತೆ ನೋಡಿಕೊಂಡರೆ, ಪೂರ್ವನಿಗದಿಯಂತೆ ರಾಜ್ಯಪಾಲ ಥಾವರ್ ಚಂದ್ ಗೆದ್ದೋಟ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಕ್ರಮಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.
ಫೌಂಡೇಶನ್ ಅವರು ಆಯೋಜಿಸಿರುವ ಕಾರ್ಯಕ್ರಮಕ್ಕೂ, ಮುಕ್ತ ವಿವಿಗೂ ಸಂಬಂಧವಿಲ್ಲ. ಯಾವುದೇ ಸಹಯೋಗದೊಂದಿಗೆ ಧನಸಹಾಯ ನೀಡುತ್ತಿಲ್ಲವೆಂದು ಕುಲಪತಿಗಳು ಸ್ಪಷ್ಟನೆ ನೀಡಿದ್ದರು. ಹೀಗಿದ್ದರೂ ಮಂಗಳವಾರ ರಾತ್ರಿ ಸಮ್ಮೇಳನವನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದಾಗಿ ಕಾರ್ಯಕ್ರಮ ರದ್ದಾಗಿರಬಹುದೆಂದು ಭಾವಿಸಲಾಗಿತ್ತು. ಆದರೆ, ಬುಧವಾರ ನಿಗದಿಯಂತೆ ಕಾರ್ಯಕ್ರಮ ಆರಂಭವಾಗಿದ್ದು, ಶಿಲ್ಪಿ ಅರುಣ್ ಯೋಗಿ ರಾಜ್ ಅವರು ಏಕಾತ್ಮ ಮಾನವ ದರ್ಶನ ಸಮ್ಮೇಳನದ ಪ್ರದರ್ಶಿನಿಯನ್ನು ಉದ್ಘಾಟಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…