ಮೈಸೂರು

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವೃದ್ದೆ ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಎಂಬುವರಾಗಿದ್ದಾರೆ. ತಿಪ್ಪೂರು ಗ್ರಾಮದ ವೀರಭದ್ರ ಎಂಬ ವ್ಯಕ್ತಿ ವೃದ್ಧೆಯ ಹಣಕ್ಕಾಗಿ ಕೊಲೆಗೈದು ಜೈಲು ಪಾಲಾಗಿದ್ದಾನೆ.

ಕೊಲೆಯಾದ ವೃದ್ಧೆಗೆ ಮೂವರು ಗಂಡು‌ ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದು,‌ಮೂವರು ಕೂಡ‌ ಪ್ರತ್ಯೇಕವಾಗಿ ವಾಸವಾಗಿದ್ದರು ಎನ್ನಲಾಗಿದೆ.

ಘಟನೆ ವಿವರ ;

ವೃದ್ದೆ ಗೌರಮ್ಮಳಿಗೆ ವೀರಭದ್ರ ತೀರ ಪರಿಚಿತನಾಗಿದ್ದು ಬಹಳಷ್ಟು ವಿಶ್ವಾಸ ಗಳಿಸಿದ್ದ. ಆದ್ದರಿಂದ ಗೌರಮ್ಮ ಅವರ ಬ್ಯಾಂಕ್ ಖಾತೆಯಲ್ಲಿನ‌ ಹಣ ಡ್ರಾ ಮಾಡುವುದು, ಇತರೆ ಕೆಲಸವನ್ನು ಮಾಡಿ‌ಕೊಡುತ್ತಿದ್ದು ಈಗ್ಗೆ ಹದಿನೈದು ದಿನಗಳ ಹಿಂದೆ ಗೌರಮ್ಮ ವೀರಭದ್ರನ ಜೊತೆ ಬ್ಯಾಂಕ್ ಹೋಗಿ 75 ಸಾವಿರ ಹಣ ಡ್ರಾ ಮಾಡಿದ್ದಾರೆ.

ಬಳಿಕ ತುರ್ತಾಗಿ ಹಣ ಬೇಕು ಕೊಡಿ ಎಂದು ಗೌರಮ್ಮ ಅವರ ಬಳಿ ಇದ್ದ 75 ಸಾವಿರ ಹಣ ಪಡೆದಿದ್ದಾನೆ. ವಾರ ಕಳೆದ ನಂತರ ಗೌರಮ್ಮ ಹಣ ಕೊಡು ಎಂದು ಕೇಳಿದಾಗ ಕೊಡುತ್ತೇನೆ ಎಂದು ಸಬೂಬು ಹೇಳಿ ರಾತ್ರಿ ವೇಳೆ ವೃದ್ಧೆ ಗೌರಮ್ಮ ಮನೆಗೆ ಹೋಗಿ ಕಪಾಳಕ್ಕೆ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಮನೆಯ ಹಿಂದೆ ಇರುವ ಶೌಚಾಲಯದ ಯುಜಿಡಿ‌ ಗುಂಡಿಗೆ ಹಾಕಿ ಮುಚ್ಷಿದ್ದಾನೆ. ಈತ್ತ ಗೌರಮ್ಮ ಕಾಣದಿರುವ ಬಗ್ಗೆ ಮಕ್ಕಳು ಹುಡುಕಾಟ ನಡೆಸಿದ್ದಾರೆ. ಇದೇ ವೇಳೆಯಲ್ಲಿ ವೀರಭದ್ರ ಕೂಡ ಗ್ರಾಮದಿಂದ ನಾಪತ್ತೆಯಾಗಿರುತ್ತಾನೆ.  ಅನುಮಾನ‌ಗೊಂಡ ಗೌರಮ್ಮನ ಮಕ್ಕಳು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ತನಿಖೆ ಆರಂಭಿಸಿದ ಪೊಲೀಸರು ವೀರಭದ್ರ ಗ್ರಾಮಕ್ಕೆ ಬಂದ‌ ನಂತರ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  ಈ ವೇಳೆ ಹಣಕ್ಕಾಗಿ ಗೌರಮ್ಮ ಅವರನ್ನು ಕೊಲೆಗೈದು, ಶವವನ್ನು ಶೌಚಾಲಯದ ಯುಜಿಡಿ ಗುಂಡಿಗೆ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.  ಬಳಿಕ ಪೊಲೀಸರು ಆರೋಪಿಯನ್ನು  ತಿಪ್ಪೂರು ಗ್ರಾಮಕ್ಕೆ ಕರೆತಂದು  ಶೌಚಾಲಯದ ಯುಜಿಡಿ ಗುಂಡಿಯೊಳಗೆ ಇದ್ದ ಗೌರಮ್ಮಳ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಕೊಲೆ‌ ಆರೋಪಿ ವೀರಭದ್ರನ್ನು ಪಟ್ಟಣದ ಪೊಲೀಸರು ಹೆಚ್ಷಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಸುದ್ದಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಎಎಸ್‌ಪಿ ಮಲ್ಲಿಕ್, ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ತಿಪ್ಪೂರು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago