ಮೈಸೂರು

ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು: ಡಾ ಕೆ.ವಿ.ರಾಜೇಂದ್ರ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಚುನಾವಣಾ ಕರ್ತವ್ಯದಲ್ಲಿ ನಿರತರಾಗುವ ವಿವಿಧ ಹಂತದ ಅಧಿಕಾರಿಗಳಿಗೆ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಮಾತನಾಡಿದರು.

FS, SST, VST, VVT ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆ ಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು ಎಂದರು.

ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಹೆಚ್ಚು ಗಮನ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ದಾಖಲಿಸಿ ಇಟ್ಟುಕೊಂಡು ಕಾಲಕಾಲಕ್ಕೆ ಈ ಕುರಿತು ವರದಿಯನ್ನು ಕಳುಹಿಸಬೇಕು ಎಂದರು.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಸಿ ತಂಡಗಳು ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಒಟ್ಟಾರೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್ , ಫ್ಲೆಕ್ಸ್ ಹಾಗೂ ವಿವಿಧ ಇಲಾಖೆಗಳ ವೆಬ್ ಸೈಟ್ ಗಳನ್ನು ಪಟ್ಟಿ ಮಾಡಿಕೊಂಡು ವೆಬ್ ಸೈಟ್ ಗಳಲ್ಲಿರುವ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು‌.

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಈ ಹಿಂದೆ ಯಾವ ಮತಗಟ್ಟೆ ಕಟ್ಟಡಗಳಲ್ಲಿ ಸೌಲಭ್ಯ ಇದೆ. ಯಾವ ಕಟ್ಟಡಗಳಲ್ಲಿ ಇಲ್ಲ ಎಂಬ ಬಗ್ಗೆ ಪಟ್ಟಿ ಮಾಡಿ ಮೂಲಸೌಕರ್ಯ ಕಲ್ಪಿಸಬೇಕು. ಆ ಪ್ರಕಾರ ಶೌಚಾಲಯ, ರಾರ‍ಯಂಪ್‌ ನಿರ್ಮಾಣ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.

ಚೆಕ್‌ಪೋಸ್ಟ್‌ ಸ್ಥಾಪನೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಈಗಲೇ ಕಾರ್ಯಪ್ರವೃತ್ತವಾಗಬೇಕು ಹಾಗೂ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಚುನಾವಣೆ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಇಡೀ ತಂಡವಾಗಿ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸಿದರೆ ಯಶಸ್ವಿಯಾಗಲು ಸಾಧ್ಯವಾಗಲಿದೆ. ಹಾಗಾಗಿ ಪ್ರತಿಯೊಬ್ಬರೂ ನಿಯೋಜಿಸಿದ ಕರ್ತವ್ಯವನ್ನು ಯಾವುದೇ ಲೋಪ ಇಲ್ಲದೆ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿನೇಶ್, ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯ ಆಯುಕ್ತರಾದ ದೇವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago