ಮೈಸೂರು

ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು – ಡಾ ಜೆ.ಸಿ.ಪ್ರಕಾಶ

ಮೈಸೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಬಹಳ ಖುಷಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಡಾ ಜೆ.ಸಿ. ಪ್ರಕಾಶ್  ಮತ ಎಣಿಕೆ ತರಬೇತಿಯಲ್ಲಿ ತಿಳಿಸಿದರು.

ಇಂದು (ಮೇ 31) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಸಿಬ್ಬಂದಿಗೆ ಮತ ಎಣಿಕೆ ತರಬೇತಿಯನ್ನು ಕುರಿತು ಅವರು ಮಾತನಾಡಿದರು.

ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಒಟ್ಟು 14, ನೈಋತ್ಯ ಶಿಕ್ಷಕರ ಕ್ಷೇತ್ರದ ಒಟ್ಟು 14 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಾದ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯದ ಒಟ್ಟು 14 ಕೌಂಟಿoಗ್ ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹ ಪಾಲ್ಗೊಂಡು ಎಣಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.

ಇದು ಬ್ಯಾಲೆಟ್ ಪೇಪರ್ ಮತದಾನ ಪ್ರಕ್ರಿಯೆ ಆಗಿದ್ದು, ಅದರ ವ್ಯಾಲಿಡ್ ಮತ್ತು ಇನ್ ವ್ಯಾಲಿಡ್ ಮತಪತ್ರದ ಬಗ್ಗೆ ಮಾಹಿತಿ ನೀಡಿದರು. ಬ್ಯಾಲೆಟ್ ಪೇಪರ್ ಗಳನ್ನು ಯಾವ ರೀತಿ ತೆರೆಯಬೇಕು, ಯಾವುದು ವ್ಯಾಲಿಡ್, ಯಾವುದು ವ್ಯಾಲಿಡ್ ಅಲ್ಲ ಎಂಬುದನ್ನು ಯಾವ ರೀತಿ ಗುರುತಿಸಬೇಕು. ಸಂಖ್ಯೆಗಳನ್ನು ಯಾವ ರೀತಿ ಕೊಡಬೇಕು. ಯಾವುದನ್ನು ರಿಜೆಕ್ಷನ್ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ ಯಾವುದುದಾದರೂ ಗೊಂದಲದ ಪರಿಸ್ಥಿತಿ ಬಂದಲ್ಲಿ ಆರ್.ಓ ಗಮನಕ್ಕೆ ತರಬೇಕು ಎಂದು ಮತ ಎಣಿಕೆ ತರಬೇತುದಾರರಿಗೆ ಸಲಹೆ ನೀಡಿದರು.

ಮತ ಎಣಿಕೆ ಸಿಬ್ಬಂದಿಗಳು ಮತ ಎಣಿಕೆಯ ದಿನ ಬೆಳಿಗ್ಗೆ 7 ಗಂಟೆಗೆ ಹಾಜರಿರಬೇಕು. ಇದು ಬಹಳ ಸುಲಭದ ಕೆಲಸವಾಗಿದ್ದು, ಮತ ಪತ್ರ ಎಣಿಕೆ ಮಾಡಿ 25 ಬ್ಯಾಲೆಟ್ ಪೇಪರ್ ಗಳ ಒಂದು ಬಂಡೆಲ್ ಮಾಡಿ, ಅದಲ್ಲಿ ಮೊದಲ ಆದ್ಯತೆಯ ಬ್ಯಾಲೆಟ್ ಪೇಪರ್‌ಗಳನ್ನು ಬೇರ್ಪಡಿಸಿ ಕೊಡಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಕಚೇರಿಯ ಸಹಾಯಕ ಚುನಾವಣಾಧಿಕಾರಿಗಳಾದ ಕವಿತಾ ರಾಜಾರಾಂ ಅವರು ಮಾತನಾಡಿ, ಚುನಾವಣೆಯ ದಿನ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ನಿಮ್ಮ ಐಡಿ ಕಾರ್ಡ್ ಗಳನ್ನು ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಮತಗಟ್ಟೆಯ ಕ್ಷೇತ್ರಗಳ ಬಳಿ ಕೌಂಟಿoಗ್ ಸೂಪರ್ವೈಸರ್, ಕೌಂಟಿoಗ್ ಅಸಿಸ್ಟೆಂಟ್ಸ್, ಕೌಂಟಿoಗ್ ಏಜೆಂಟ್ಸ್ ಗಳಿಗೆ ಮಾತ್ರ ಪ್ರವೇಶ ನೀಡಬೇಕು. ತರಬೇತುದಾರರು ಮತಗಟ್ಟೆ ಒಳಗೆ ಮೊಬೈಲ್ ನ್ನು ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಚುನಾವಣಾಧಿಕಾರಿಗಳ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

19 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

20 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

1 day ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 day ago