ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ ಬಳಿ ನಡೆದಿದೆ.
ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬೇಲಿ ದಾಟುವಾಗ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಕಾಡಾನೆ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





