Categories: ಮೈಸೂರು

ನಂಜನಗೂಡು| ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌: ಕೃಷಿ ಪರಿಕರ, ಬೆಳೆ ಬೆಂಕಿಗಾಹುತಿ

ನಂಜನಗೂಡು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್‌ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ.

ಇದನ್ನೂ ಓದಿ:- ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯ 

ಘಟನೆ ನಡೆಯುತ್ತಿದ್ದಂತೆ ಸೆಸ್ಕಾಂ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದು, ಜಮೀನಿನಲ್ಲಿ ವಿದ್ಯುತ್‌ ಕಂಬಗಳು ಹಾದು ಹೋಗಿವೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಹೊತ್ತುಕೊಂಡಿವೆ. ಶಾರ್ಟ್‌ ಸರ್ಕ್ಯೂಟ್‌ಗೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಈ ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

10 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

47 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago