ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.
ಮಂಚೂನಾಯಕ ಎಂಬುವವನೇ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಕಿಡಿಕಾರಿದ್ದು, ವಿದ್ಯುತ್ ತಂತಿ ತುಂಡಾಗಿ ಎರಡು ದಿನ ಕಳೆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ದಿನಗಳಿಂದ ಹಲವಾರು ಬಾರಿ ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಗಮನ ಹರಿಸಿಲ್ಲ. ಲೈನ್‌ಮನ್ ವಸಂತ್ ಎಂಬಾತನ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಿದ್ಯುತ್ ಇಲಾಖೆಯ ಅಧಿಕಾರಿಗಳು, ಇಲಾಖೆಯಿಂದ ಸೂಕ್ತ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಇದಲ್ಲದೇ ಕುಟುಂಬದ ಒಬ್ಬ ವ್ಯಕ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವ ಭರವಸೆ ನೀಡಿದ್ದು, ನಿರ್ಲಕ್ಷ್ಯಕ್ಕೆ ಕಾರಣರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇದಕ್ಕೆ ಒಪ್ಪದ ಗ್ರಾಮಸ್ಥರು ವಿದ್ಯುತ್ ಇಲಾಖೆಯಲ್ಲಿ ಕುಟುಂಬದ ಒಬ್ಬರಿಗೆ ಶಾಶ್ವತ ಕೆಲಸ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…