ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ ಪರಿಣಾಮಿಪುರ ಗ್ರಾಮದಲ್ಲಿ ನಡೆದಿದೆ.
ಪರಿಣಾಮಿಪುರ ಗ್ರಾಮದ ನಿವಾಸಿಯಾದ ಗುರುಮಲ್ಲಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಗುರುಮಲ್ಲಪ್ಪ ಅವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ಮಾಡಿ ತುಳಿದು ಸಾಯಿಸಿದೆ.
ಘಟನಾ ಸ್ಥಳಕ್ಕೆ ಟಿ.ನರಸೀಪುರ ವಲಯ ಅರಣ್ಯಾಧಿಕಾರಿ ಉಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…