ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಹಂಚೀಪುರ ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಆನೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯ ರೈತರು ಆಗ್ರಹಿಸಿದ್ದರು.
ರೈತರ ಒತ್ತಾಯದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾಕಾನೆಗಳ ನೆರವಿನೊಂದಿಗೆ ಕಾರ್ಯಾಚರಣೆ ಕೈಗೊಂಡಿತ್ತು. ಇದೀಗ ಕಾರ್ಯಾಚರಣೆ ಯಶಸ್ವಿಯಾಗಿದ್ದು, ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಸೆರೆ ಹಿಡಿಯಲಾಗಿದೆ.




