ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ ದಂತ ಕಳ್ಳಸಾಗಣೆ ಜಾಲದ ಮೇಲೆ ದಾಳಿ ನಡೆಸಿ, 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಿವಿಧ ಗಾತ್ರದ ಮೂರು ದೊಡ್ಡ ದಂತಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳ ನಿಖರವಾದ ತೂಕವನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲವಾದರೂ ಮೂಲಗಳು ಹೇಳುವಂತೆ ದಂತಗಳು ತಲಾ 5 ರಿಂದ 30 ಕೆಜಿ ತೂಕವಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಾದ ಹಾಗೂ ಆಂಧ್ರಪ್ರದೇಶ ಸರ್ಕಾರದ ನಿವೃತ್ತ ಅರಣ್ಯಾಧಿಕಾರಿ ಜಮುನಾ ರಾಣಿ ಕಾಕಬುಲ್, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೈಯದ್ ಫಯಾಜ್, ಕೊಳ್ಳೇಗಾಲದ ಮುನೀರ್ ಪಾಷಾ, ಮತ್ತು ಕೊಳ್ಳೇಗಾಲದ ಅಜ್ಗರ್ ಖಾನ್ ಎಂಬವರನ್ನು ಬಂಧಿಸಲಾಗಿದೆ. ದಾಳಿಯ ಸಮಯದಲ್ಲಿ ಜಮುನಾ ರಾಣಿ ಕಾಕಬುಲ್ ಮತ್ತು ಅವರ ಪತಿ ವೆಂಕಟೇಶ್ ಕಾಕಬುಲ್ ಇಬ್ಬರೂ ಮನೆಯಲ್ಲಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಜಮುನಾ ರಾಣಿ ಕಾಕಬುಲ್ ಅಕ್ರಮವಾಗಿ ದಂತ ವ್ಯಾಪಾರಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಆಕೆಯ ಪತಿ ವೆಂಕಟೇಶ್ ಕಾಕಬುಲ್ ಈ ದಂಧೆಯಲ್ಲಿ ಯಾವುದೇ ಪಾತ್ರ ವಹಿಸಿಲ್ಲ ಮತ್ತು ಅವರ ಪತ್ನಿಯ ಅಕ್ರಮ ಚಟುವಟಿಕೆಗಳ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…