ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದಾರೆ.
ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಶಾಸಕರು, ವಿವಿಧ ಇಲಾಖೆಗಳ ಮುಖೇನ ತಾಲೂಕಿಗೆ 311.67 ಕೋಟಿ ರೂ. ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇದಲ್ಲದೇ ತಾಲ್ಲೂಕಿನ ಹಲವು ಕೆರೆಗಳಿಗೆ ನೀರು ತುಂಬಿಸುವ ಸಲುವಾಗಿ 38 ಕೋಟಿ ರೂ.ಗಳ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಶೀಘ್ರದಲ್ಲೇ ಮಂಜೂರಾತಿ ದೊರೆಯಲಿದೆ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಮಾಹಿತಿ ನೀಡಿದರು.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗಾಗಿ 40 ಕೋಟಿ ರೂ ನೀರಾವರಿ ಯೋಜನೆಗಳ ಅಭಿವೃದ್ಧಿಗಾಗಿ 146 ಕೋಟಿ ರೂ, ಸಣ್ಣ ನೀರಾವರಿ ಇಲಾಖೆಗೆ 13.85 ಕೋಟಿ ರೂ, ಅಲ್ಪಸಂಖ್ಯಾತರ ಕಾಲೋನಿಗಳಿಗೆ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 3 ಕೋಟಿ ರೂ., ಐಟಿಡಿಪಿ ಇಲಾಖೆಗೆ 4.80 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆಗೆ 23.20 ಕೋಟಿ ರೂ., ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 10 ಕೋಟಿ ರೂ., ಸೆಸ್ಕ್‌ನ ವಿವಿಧ ವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣಕ್ಕೆ 57.32 ಕೋಟಿ ರೂ., ಹಿಂದುಳಿದ ವರ್ಗಗಳ ಇಲಾಖೆಯ ಅರಸುಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ 2 ಕೋಟಿ ರೂ, ಹುಣಸೂರು ಸಾರ್ವಜನಿಕರ ಅಸ್ಪತ್ರೆಗೆ ಮುಂದುವರೆದ ಕಾಮಗಾರಿಗೆ 9.50 ಕೋಟಿ ರೂ.ಗಳನ್ನು ನೀಡಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣಗಳು, ದೇವಾಲಯಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಮತ್ತು ಸಮುದಾಯ ಭವನಗಳಿಗಾಗಿ 2 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…