ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಕೇಂದ್ರ ಕಾರಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಒಳ್ಳೆ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ಯಾರಂಟಿಗಳಿಂದ ಒಬ್ಬ ಹೆಣ್ಣು ಮಗಳಿಗೆ ತಿಂಗಳಿಗೆ ನಾಲ್ಕೈದು ಸಾವಿರ ರೂಪಾಯಿ ಉಳಿತಾಯ ಆಗುತ್ತದೆ. ಆದರೆ ಇದನ್ನು ಅರಿಯದ ವಿಪಕ್ಷಗಳು ಟೀಕೆ ಮಾಡುತ್ತಿರುವುದು ತಪ್ಪು ಎಂದರು.
ಅಮಾನವೀಯ ಕೃತ್ಯ
ಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಇದೊಂದು ಅಮಾನವೀಯ ಕೃತ್ಯ. ಈಗಾಗಲೇ ಅಲ್ಲಿನ ಎಸ್ಪಿಗೆ ಪತ್ರ ಬರೆದಿದ್ದೇನೆ. ಹಂಪಿಯನ್ನ ನೋಡಲು ಸಾಕಷ್ಟು ವಿದೇಶಿ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ. ಅಂತವರ ಮೇಲೆ ಹೇಯ ಕೃತ್ಯ ನಡೆಸಿದರೆ ಯಾವ ಸಂದೇಶ ಹೋಗುತ್ತದೆ. ಇದೊಂದು ತಲೆ ತಗ್ಗಿಸುವ ಪರಿಸ್ಥಿತಿ ಎಂದು ಹೇಳಿದರು.
ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಜೊತೆಗೆ ಅಲ್ಲಿರುವ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್‌ಗಳನ್ನ ಬಂದ್ ಮಾಡಬೇಕು. ಅಲ್ಲಿಗೆ ಬರುವಂತಹ ವಿದೇಶಿಗರಿಗೆ ಹೆಚ್ಚಿನ ಭದ್ರತೆ ಕೊಡಬೇಕು ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…