Mysore
23
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಪ್ರವೇಶ ಪರೀಕ್ಷೆ : ಅಪರ ಜಿಲ್ಲಾಧಿಕಾರಿಗಳಿಂದ ಪರೀಕ್ಷೆ ಕೇಂದ್ರಕ್ಕೆ ಭೇಟಿ, ಪರಿಶೀಲನೆ

mysore-distric-officer-news

ಮೈಸೂರು: ‌ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪೀಪಲ್ಸ್‌ ಪಾರ್ಕ್‌ ಭೇಟಿ ನೀಡಿ ಪರೀಕ್ಷೆ ಸುಲಲಿತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಮೈಸೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಎಂಬಿಎ ಹಾಗೂ ಎಂಸಿಎ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಮೈಸೂರು ನಗರದಲ್ಲಿ ಎಂಸಿಎ ಪರೀಕ್ಷೆಗೆ– 3004 ವಿದ್ಯಾರ್ಥಿಗಳು ಹಾಗೂ ಎಂಬಿಎ ಪರೀಕ್ಷೆಗೆ- 4856 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೋಂದಣಿ ಮಾಡಿಕೊಂಡಿದ್ದು MCA ಪರೀಕ್ಷೆಯು ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಮತ್ತು MBA ಪರೀಕ್ಷೆಯು ಮಧ್ಯಾಹ್ನ 02.30 ರಿಂದ 04.30 ಗಂಟೆಯವರೆಗೆ ನಡೆಯುತ್ತಿದೆ.

ಇದನ್ನೂ ಓದಿ: ಯುಜಿಸಿ ನೆಟ್-ಕೆಸೆಟ್‌ ಪರೀಕ್ಷೆಗೆ ತರಬೇತಿ

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ, ಮೈಸೂರು ನಗರದಲ್ಲಿ PG CET ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ವೀಕ್ಷಕರು ಹಾಜರಿದ್ದರು.

Tags:
error: Content is protected !!