ಮೈಸೂರು: ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಪೀಪಲ್ಸ್ ಪಾರ್ಕ್ ಭೇಟಿ ನೀಡಿ ಪರೀಕ್ಷೆ ಸುಲಲಿತವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಮೈಸೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಎಂಬಿಎ ಹಾಗೂ ಎಂಸಿಎ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಮೈಸೂರು ನಗರದಲ್ಲಿ ಎಂಸಿಎ ಪರೀಕ್ಷೆಗೆ– 3004 ವಿದ್ಯಾರ್ಥಿಗಳು ಹಾಗೂ ಎಂಬಿಎ ಪರೀಕ್ಷೆಗೆ- 4856 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೋಂದಣಿ ಮಾಡಿಕೊಂಡಿದ್ದು MCA ಪರೀಕ್ಷೆಯು ಬೆಳಿಗ್ಗೆ 10.30 ರಿಂದ 12.30 ಗಂಟೆಯವರೆಗೆ ಮತ್ತು MBA ಪರೀಕ್ಷೆಯು ಮಧ್ಯಾಹ್ನ 02.30 ರಿಂದ 04.30 ಗಂಟೆಯವರೆಗೆ ನಡೆಯುತ್ತಿದೆ.
ಇದನ್ನೂ ಓದಿ: ಯುಜಿಸಿ ನೆಟ್-ಕೆಸೆಟ್ ಪರೀಕ್ಷೆಗೆ ತರಬೇತಿ
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ, ಮೈಸೂರು ನಗರದಲ್ಲಿ PG CET ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ವೀಕ್ಷಕರು ಹಾಜರಿದ್ದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…