ಮೈಸೂರು

ಕುಡಿಯುವ ನೀರಿನ ಸಮ್ಯಸ್ಯೆಗೆ ಕಂಟ್ರೋಲ್‌ ರೂಂ ಸ್ಥಾಪನೆ

ಮೈಸೂರು: ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಅಥವಾ ಪ್ರವಾಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ಹಾಗೂ ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಪ್ರಕರಣಗಳು ಕಂಡು ಬಂದಲ್ಲಿ ದೂರುಗಳನ್ನು ದಾಖಲಿಸಲು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕಛೇರಿಗಳಲ್ಲಿ 24×7 ಕಂಟ್ರೋಲ್ ರೂಂ ನ್ನು ತೆರೆಯಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ದೂ.ಸಂ:0821-2423800,1077,  ಮೈಸೂರು ತಾಲ್ಲೂಕು ಕಛೇರಿ ದೂ.ಸಂ:0821-2414812, ನಂಜನಗೂಡು ದೂ.ಸಂ:08221-223108, ತಿ.ನರಸೀಪುರ ದೂ.ಸಂ:08227-260210, ಹುಣಸೂರು ದೂ.ಸಂ:08222-252959, ಕೆ.ಆರ್.ನಗರ ದೂ.ಸಂ:08223-262371, ಸಾಲಿಗ್ರಾಮ ದೂ.ಸಂ:08223-283833, ಪಿರಿಯಾಪಟ್ಟಣ ದೂ.ಸಂ:08223-274175, ಹೆಚ್.ಡಿ.ಕೋಟೆ ದೂ.ಸಂ:08228-255325, ಸರಗೂರು ದೂ.ಸಂ:08228-296100 ನ್ನು ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

44 mins ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

2 hours ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

2 hours ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

2 hours ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

3 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

4 hours ago