ಮೈಸೂರು

ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಯಿಂದ ರಾಮರಾಜ್ಯ ಸ್ಥಾಪನೆ: ಶಾಸಕ ಜಿಟಿಡಿ

ಮೈಸೂರು: ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು .ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಮಾಜಿ ಸಚಿವರೂ ಆದಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಾರ್ಮಿಕರ ಅತಿ ಹೆಚ್ಚು ಅಂಕಗಳನ್ನು ಗಳಿಸಿದ 39 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು.

ದುಡಿಯುವ ವರ್ಗಗಳಲ್ಲಿ ಶೇ.೫೦ ರಷ್ಟು ಮಹಿಳೆಯರು ಇದ್ದಾರೆ. ಜಮೀನು, ಹೈನುಗಾರಿಕೆ,ಗುಡಿ ಕೈಗಾರಿಕೆ,ಜವಳಿ, ಮನೆಯಲ್ಲಿ ಕೆಲಸ ಮಾಡುತ್ತಾರೆ.

ಜಮೀನಿನಲ್ಲಿ ಪುರುಷರಷ್ಠೇ ಕಳೆ ಕೀಳುತ್ತಾರೆ. ನಾಟಿ ಹಾಕುತ್ತಾರೆ. ಈಗ ಮಹಿಳೆಯರು ಆಧುನಿಕ ಕಾಲದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕಾಗಿದೆ ಎಂದು ಸಲಹೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಆರ್ಥಿಕ ಸಚಿವೆಯಾಗಿ 6 ಬಜೆಟ್‌ ಮಂಡಿಸಿ ದಾಖಲೆ ಬರೆದಿದ್ದಾರೆ. ಅವರು ಪಡೆದ ಶಿಕ್ಷಣ, ವಿದ್ವತ್‌ ದೇಶದ ಎಲ್ಲ ಹೆಣ್ಣು ಮಕ್ಕಳಿಗೆ ಮಾದರಿಯಾಗಬೇಕು ಎಂದರು. 

ಹಿಂದಿನ ಅವಧಿಯಲ್ಲಿ 1 ಲಕ್ಷದ 9 ಸಾವಿರ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿತ್ತು. ಕೊರೊನಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭಾರೀ ಅನುಕೂಲವಾಯಿತು. ಈಗ ಲ್ಯಾಪ್‌ಟಾಪ್‌ ಪಡೆದ ವಿದ್ಯಾರ್ಥಿನಿಯರು ತಮ ಸಶಕ್ತವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜತೆಯಲ್ಲಿ ಬದುಕು ಕಟ್ಟಿಕೊಳ್ಳಲು ಚಿಂತನೆ ನಡೆಸಬೇಕು. ಜತೆಗೆ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಗೊಂದಲವಿಲ್ಲದೇ ಆಯ್ಕೆ ಮಾಡಿದ ವಿಷಯದ ಮೇಲೆ ನಿರಂತರ ಅಧ್ಯಯನ ನಡೆಸಿದರೆ ತಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳೆಯರು ಸರ್ಕಾರದ ಸವಲತ್ತುಗಳನ್ನು ಪಡೆಯಬೇಕು. ಸ್ವಯಂ ಉದ್ಯೋಗ ಸ್ಥಾಪಿಸಿ ಬೇರೆಯವರಿಗೆ ನೆರವಾಗುವ ರೀತಿಯಲ್ಲಿ ಅಭಿವೃದ್ಧಿ ಹೊರಬೇಕೆಂದು ನುಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜೇಶ್‌ ಜಾಧವ್‌, ಮುಖಂಡರಾದ ಚನ್ನೇಗೌಡ, ಸತೀಶ್‌, ರಾಜು, ಕುಮಾರಸ್ವಾಮಿ, ಮಹದೇವು, ಶಿವಲಿಂಗ ಮುಂತಾದವರು ಇದ್ದರು

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago