ಮೈಸೂರು

ಆದರ್ಶ ವ್ಯಕ್ತಿಗಳ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು – ಸಿ. ಎನ್ ಮಂಜೇಗೌಡ

ಮೈಸೂರು :  ವೇಮನ ಹಾಗೂ ಅಂಬಿಗರ ಚೌಡಯ್ಯನವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನ ಪಾಲಿಸಬೇಕು. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಹೇಳಿದರು.

ಇಂದು ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಮಹಾಯೋಗಿ ಶ್ರೀ ವೇಮನ ಜಯಂತಿ ಮತ್ತು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆಗಳು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದು ಜನರು ಭಾಗವಹಿಸಿ ಇದರಿಂದ ಸಿಗುವ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ವ್ಯಕಿಗಳಾಗಲಿ ಎಂದು. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ವಿಚಾರ ಹಾಗೂ ತಿಳುವಳಿಕೆಗಳು ಹೆಚ್ಚಾಗುತ್ತವೆ.

ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ದಿಯಾಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು.

ಕೆಟ್ಟ ವಿಚಾರಗಳು ಮನಸ್ಸಿನಲ್ಲಿ ಬಂದಾಗ ಅವುಗಳನ್ನು ತೊರೆದು ಒಳ್ಳೆಯ ವಿಚಾರದತ್ತ ಗಮನ ಕೊಡಬೇಕು. ಕ್ರೋದ, ಮದ -ಮತ್ಸರಗಳನ್ನು ಬಿಟ್ಟು ಸಹಬಾಳ್ವೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್, ಕನ್ನಡಪರ ಹೋರಾಟಗಾರರಾದ ವಿಠಲ್ ಮೂರ್ತಿ, ಪ್ರೊ. ಜ್ಯೋತಿ ಶಂಕರ್, ನಿವೃತ್ತ ಪ್ರಧ್ಯಾಪಕರಾದ ಪ್ರೊ. ಎಚ್. ಎಂ. ವಸಂತಮ್ಮ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

7 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

8 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

9 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

12 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

12 hours ago