ಮೈಸೂರು

ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರೂ ಗರ್ವದಿಂದ ಭಾಗವಹಿಸಬೇಕು : ಡಾ. ಕೆ ವಿ ರಾಜೇಂದ್ರ

ಮೈಸೂರು : ಪ್ರಪಂಚದಲ್ಲಿ ಅತ್ಯಂತ ದೊಡ್ಡ ಸಾರ್ವತ್ರಿಕ ಚುನಾವಣೆಯದಂತಹ ಭಾರತದ ಲೋಕಸಭಾ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರು ಗರ್ವದಿಂದ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಸದೃಢ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಕರೆ ನೀಡಿದರು.

ಇಂದು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಕುವೆಂಪುನಗರದ ಜ್ಞಾನಗಂಗ ಶಾಲೆಯಲ್ಲಿ ಆಯೋಜಿಸಲಾಗಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮತ ನೀಡುವುದು ಪ್ರತಿಯೊಬ್ಬ ಮತದಾರನ ಹಕ್ಕು. ಹಾಗಾಗಿ ಪ್ರತಿಯೊಬ್ಬ ಮತದಾರನು ಕಡ್ಡಾಯವಾಗಿ ಮತ ಹಾಕುವ ಮೂಲಕ ಚುನಾವಣೆಯ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದರು.

ಇಂದಿನಿಂದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 2925 ಮತಗಟ್ಟೆಗಳಲ್ಲಿ ಮತದಾರರಿಗೆ ಮತಗಟ್ಟೆಗಳಲ್ಲಿ ಸಿಗುವ ಸೌಲಭ್ಯಗಳು ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ನಡೆ ಮತಗಟ್ಟೆಗಳ ಕಡೆ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ.

ಆ ಹಿನ್ನೆಲೆ ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ ಧ್ವಜಾರೋಹಣ ಮಾಡಿ ಮತಗಟ್ಟೆಗಳ ಬಗ್ಗೆ ಜನರಲ್ಲಿ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ ಎಂದರು.

ಮತದಾರರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಮತದಾನದ ದಿನ ಬೇಕಾಗುವಂತಹ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಹಿರಿಯರು ಮತ್ತು ವಿಶೇಷ ಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿರುತ್ತದೆ.

ಅದಲ್ಲದೆ ಬಿಸಿಲು ಹೆಚ್ಚಾದಂತೆಲ್ಲಾ ಮತದಾರರ ಹಿತ ದೃಷ್ಟಿಯಿಂದ ಆಸನದ ವ್ಯವಸ್ಥೆ ಇರುವ ವೈಟಿಂಗ್ ರೂಮ್ ನ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದನ್ನು ಪ್ರತಿಯೊಬ್ಬ ಮತದಾರರು ಉಪಯೋಗಿಸಿಕೊಂಡು ಮತದಾನ ಮಾಡಲು ಮುಂದೆ ಬರಬೇಕು ಎಂದು ತಿಳಿಸಿದರು.

ಕ್ಯೂ ಮ್ಯಾನೇಜ್ಮೆಂಟ್ ಆಪ್ ನ ಮೂಲಕ ಸರದಿ ಸಾಲುಗಳಿಂದ ಜನರಿಗೆ ಆಗುವ ಪ್ರತ್ಯೇಕ ಸಾಲುಗಳ ನಿರ್ಮಾಣ ಮಾಡಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಮೂರು ಬೂತ್ ಗಿಂತ ಹೆಚ್ಚಾಗಿರುವಲ್ಲಿ ವೋಟರ್ ಅಸಿಸ್ಟೆಂಟ್ ಬೂತ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು ಇದರಿಂದ ಮತದಾರರಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.

ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸುವುದು ಅಥವಾ ಅವರನ್ನು ಕಡ್ಡಾಯವಾಗಿ ಮತದಾನ ಅರಿವು ಮೂಡಿಸುವುದು ಕೇವಲ ಅಧಿಕಾರಿಗಳದ್ದಷ್ಟೇ ಕೆಲಸವಲ್ಲ. ಪ್ರತಿಯೊಬ್ಬ ಯುವಕರು ಚುನಾವಣೆಯ ಹಬ್ಬದಲ್ಲಿ ಇತರರಿಗೂ ಅದರ ಮಹತ್ವವನ್ನು ತಿಳಿಸಿ ಕಡ್ಡಾಯವಾಗಿ ತಮ್ಮ ಸುತ್ತಮುತ್ತಲಿನ ಜನರು ಮತದಾನ ಮಾಡುವಂತೆ ನೋಡಿಕೊಳ್ಳುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ಐಕಾನ್ ಗಳಿಂದ ಮತದಾನ ಪ್ರಾತ್ಯಕ್ಷಿಕೆಯ ಮೂಲಕ ಪ್ರತಿ ಮತಗಟ್ಟೆಗಳಲ್ಲಿಯೂ ಮತದಾರರಲ್ಲಿ ಮತದಾನ ಮಾಡುವ ಕ್ರಮಗಳನ್ನು ತಿಳಿಸಲಾಗುವುದು ಎಂದರು.

ಏಪ್ರಿಲ್ 26ರಂದು ರಾಷ್ಟ್ರೀಯ ಹಬ್ಬವಾದ ಸಾರ್ವತ್ರಿಕ ಚುನಾವಣೆ ನಡೆಯುವುದರಿಂದ ಎಲ್ಲಾ ಕಚೇರಿಗಳಿಗೂ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿರುತ್ತದೆ.

ಹಾಗಾಗಿ ಪ್ರತಿಯೊಬ್ಬ ಕಾರ್ಮಿಕರು ಹಾಗೂ ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡುವ ವ್ಯಕ್ತಿಯು ಸಹ ಮತದಾನದಲ್ಲಿ ಪಾಲ್ಗೊಂಡು ಅಂದು ಮತದಾನವನ್ನು ತಮ್ಮ ಮೊದಲ ಆಯ್ಕೆಯನ್ನಾಗಿ ಮಾಡಿ, ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ.ಎಂ ಗಾಯತ್ರಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್.ಮಧು, ಚುನಾವಣಾ ರಾಯಭಾರಿ ತನಿಷ್ಕಾ ಮೂರ್ತಿ, ಪ್ಯಾರಾ ಅಥ್ಲೆಟಿಕ್ಸ್ ಆಟಗಾರ ಮಹೇಂದ್ರ ಎಂ.ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

5 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago