Mysore
27
broken clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು:ಡಾ.ಕೆ.ವಿ.ರಾಜೇಂದ್ರ

ಮೈಸೂರು: ತಮ್ಮ ಸುತ್ತಮುತ್ತಲೂ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಬಹುದಾಗಿದ್ದು, ಮೈಸೂರನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಿ ಇತರರಿಗೂ ಪ್ರೇರಣೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ  ಸಲಹೆ ನೀಡಿದರು.

ಶುಕ್ರವಾರ(ಜೂ.7) ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕಾರ್ಯ ಪಡೆ (ಟಾಸ್ಕ್ ಫೋರ್ಸ್) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸುವ ಸ್ವಯಂ ಸೇವಾ ಸಂಸ್ಥೆಗಳಿಗೆ “ಬಾಲಮಿತ್ರ” ಎಂದು ಪ್ರಮಾಣ ಪತ್ರ ನೀಡಲು ಸೂಚಿಸಿದರು.

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರನ್ವಯ ಕಲಂ 17ರಡಿ ನೇಮಕಗೊಂಡಿರುವ ಎಲ್ಲಾ ಇಲಾಖೆಗಳು ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೊಧಿ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದರು.

ಪ್ರತಿ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪ್ರತಿ ವಾರ್ಡ್ ಗಳಲ್ಲಿಯೂ ಜಾಗೃತಿ ಸಪ್ತಾಹ ಹಮ್ಮಿಕೊಂಡು ಜಿಲ್ಲೆಯಲ್ಲಿರುವ ಪ್ರತಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಂತೆ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಿಲ್ಲವೆಂದು ಧೃಢೀಕರಿಸಿರುವ ಫಲಕಗಳನ್ನು ಹಾಕಲು ಕ್ರಮ ವಹಿಸಿ, ಪರವಾನಗಿ ಪಡೆಯದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ, ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ, ಮೈಸೂರು ಉಪ ವಿಭಾಗಾಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸರ್ಕಾರೇತರ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!