Mysore
29
scattered clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಸಿಸಿಟಿವಿ ಕಣ್ಗಾವಲಿನಲ್ಲಿ ಇವಿಎಂ ಮತಯಂತ್ರಗಳು !

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.

ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್‌ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.

ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.ಎಣಿಕಾ ಕೇಂದ್ರದ ದಿನದಂದು ಮುದ್ರೆ ತೆಗೆಯುವ ತನಕ ಯಾರಿಗೂ ಹತ್ತಿರ ತೆರಳಲು ಅವಕಾಶ ಇರುವುದಿಲ್ಲ. ಎಣಿಕಾ ಕೇಂದ್ರದಲ್ಲಿ ಮೂರು ಹಂತದಲ್ಲಿ ಭದ್ರತಾ ಕ್ರಮಗಳನ್ನು ಅನುಸರಿಸಲಾಗಿದ್ದು, ಮೊದಲನೇ ಹಂತದಲ್ಲಿ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್, ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ಕಟ್ಟಡದ ಸುತ್ತಮುತ್ತ ಸಿವಿಲ್ ಪೊಲೀಸ್ ಭದ್ರತೆ ಹಾಕಲಾಗಿದೆ.

Tags:
error: Content is protected !!