ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ.
ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಿ ಅಭ್ಯರ್ಥಿಗಳು ಮತ್ತು ಅವರ ಪರ ಏಜೆಂಟರ ಸಮ್ಮುಖದಲ್ಲಿ ಸೀಲ್ ಮಾಡಲಾಯಿತು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಜಿಲ್ಲೆಯ ೨೨೦೨ ಮತಗಟ್ಟೆಗಳಲ್ಲಿ ಮತದಾನ ಮುಗಿದ ಬಳಿಕ ನಿಗದಿತ ಸ್ಥಳಗಳಲ್ಲಿ ಡಿಮಸ್ಟರಿಂಗ್‌ಕಾರ್ಯ ನಡೆಯಿತು. ನಂತರ, ಒಂದೊಂದು ವಿಧಾನಸಭಾವಾರು ಮತಯಂತ್ರಗಳನ್ನು ಇಡಲು ಸಜ್ಜುಗೊಳಿಸಿದ್ದ ಕೊಠಡಿಗಳಿಗೆ ಆಯಾಯ ಮತಗಟ್ಟೆ ಅಧಿಕಾರಿಗಳು ತೆರಳಿ ಮತಯಂತ್ರ ಇಟ್ಟು ಸಹಾಯಕ ಚುನಾವಣಾಧಿಕಾರಿಗಳಿಗೆ ಮತದಾನದ ಪ್ರಮಾಣದ ಮಾಹಿತಿಯನ್ನು ಒದಗಿಸಿದರು.
ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಎಂಟು ಕ್ಷೇತ್ರದ ಮತಯಂತ್ರಗಳನ್ನು ಇಟ್ಟಿರುವ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಚುನಾವಣಾ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಿ ಮುದ್ರೆ ಹಾಕಲಾಯಿತು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…