ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಸಚಿವ ಮಹದೇವಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಾಯಳುಗಳಿಗೆ ಸರ್ಕಾರದಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರಿಗೆ ಸ್ಥಿತಿ ಕ್ರಿಟಿಕಲ್ ಇದೆ.
ಇದೊಂದು ಆಕಸ್ಮಿಕ ಘಟನೆ. ಯಾರು ಭಯ ಪಡುವ ಆತಂಕ ಇಲ್ಲ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ: ಸಿಲಿಂಡರ್ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ
ಘಟನೆಯಲ್ಲಿ ಓರ್ಮ ಮೃತ ಪಟ್ಟಿದ್ದಾನೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸರ್ಕಾರವೇ ಚಿಕಿತ್ಸಾ ವೆಚ್ಚ ಭರಸಿಲಿದೆ. ಮೃತ ಸಲೀಂ ಮೈಸೂರಿನಲ್ಲಿ ಹೊಟ್ಟೆ ಪಾಡಿಗಾಗಿ ಹಲವು ವ್ಯಾಪಾರ ಮಾಡುತ್ತಿದ್ದ. ಐಸ್ ಕ್ಯಾಂಡಿ ಮಾರುತ್ತಿದ್ದ ಜೊತೆಗೆ ಬಲೂನ್ ಮಾರುತ್ತಿದ್ದ. ಹಿಲೀಯಂನ್ನ ಪೌಡರ್ ಬಳಸಿ ತಯಾರಿಸಿಕೊಳ್ಳುತ್ತಿದ್ರು. ಈ ಬಗ್ಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.
ಮಾಹಿತಿ ಪಡೆದ ಎನ್‌ಐಎ
ಘಟನೆ ಬಗ್ಗೆ ಎನ್ಐಎ ಘಟನೆಯ ಮಾಹಿತಿ ಪಡೆದುಕೊಂಡಿದೆ. ಇಂತಹ ಘಟನೆ ನಡೆದಾಗ ಎನ್ಐಎ ಮಾಹಿತಿ ಪಡೆಯುವುದು ಸಹಜ ಪ್ರಕ್ರಿಯೆ. ಅದರಂತೆ ಅವರು ತನಿಖೆ ಮಾಡಲಿ ನಮ್ಮದೇನು ಅಭ್ಯಂತರವಿಲ್ಲ. ಈಗಾಗಲೇ ಎನ್ಐಎ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಅದೊಂದು ಆಕಸ್ಮಿಕ ಘಟನೆ. ಮೃತ ಸಲೀಂ ಹೊಟ್ಟೆ ಪಾಡಿಗಾಗಿ ವಿವಿಧ ಕೆಲಸಗಳನ್ನ ಮಾಡುತ್ತಿದ್ದ. ಯಾರು ಸಹ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…