ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ. ದಿನೇಶ್ ಅವರು ತಿಳಿಸಿದರು.
ಇಂದು(ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ರಪ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಉದ್ದಿಮೆದಾರರಿಗೆ ನಾನು ಪ್ರತಿದಿನ ಹೊಸತನ್ನು ಕಲಿಯಬೇಕು ಎನ್ನುವ ಹಂಬಲ ಇರಬೇಕು. ದೇಶದಲ್ಲಿ 778 ಮಿಲಿಯನ್ ಡಾಲರ್ ಮೊತ್ತದ ವಸ್ತುಗಳನ್ನು ರಪ್ತು ಮಾಡಿದ್ದು, 860 ಮಿಲಿಯನ್ ಡಾಲರ್ ಮೊತ್ತದ ಸರಕನ್ನು ಆಮದನ್ನು ಮಾಡಿಕೊಂಡಿದ್ದೇವೆ. ಕರ್ನಾಟಕವು ರಪ್ತು ಮಾಡುವುದರಲ್ಲಿ 4 ನೆ ಸ್ಥಾನದಲ್ಲಿ ಇದೆ. ನಮ್ಮ ರಾಜ್ಯವು ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದರು.
ಭಾರತ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೇಂದ್ರವನ್ನು ಸ್ಥಾಪಿಸಿದೆ. ಮೈಸೂರು ಜಿಲ್ಲೆಯಲ್ಲಿಯೂ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶಗಳಿವೆ. ಪ್ರತಿ ವರ್ಷ ಶೇಕಡಾ 5% ರಫ್ತನ್ನು ಹೆಚ್ಚಳ ಮಾಡಬೇಕು ಎಂದರು.
ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕರಾದ ಸಿ ಎಸ್ ಬಾಬು ನಾಗೇಶ್ ಮಾತನಾಡಿ, ತಾವೆಲ್ಲರೂ ಯುವ ಉದ್ಯಮಿಗಳು ಇದ್ದೀರಾ. 6 ದಿನಗಳ ಕಾಲ ಹಮ್ಮಿಕೊಂಡಿರುವ ಹಮ್ಮಿಕೊಂಡಿರುವ ರಪ್ತು ನಿರ್ವಹಣಾ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಿ. ರಪ್ತು ಕೈಗಾರಿಕೆಗಳ ಆರ್ಥಿಕ ಆದಾಯವನ್ನು ಹೆಚ್ಚಿಸುತ್ತದೆ. ಇದರಿಂದ ಹೆಚ್ಚಿನ ಉತ್ಪಾದನೆ ಮಾಡಿ ಕೈಗಾರಿಕೆಯು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.
ಮೈಸೂರು ಕೈಗಾರಿಕಾ ಸಂಘದ ಕಾರ್ಯದರ್ಶಿ ಗಳಾದ ಸುರೇಶ್ ಕುಮಾರ್ ಜೈನ್ ಮಾತನಾಡಿ, ಮೈಸೂರಿನಲ್ಲಿ ರಪ್ತು ಕೇಂದ್ರ ಸ್ಥಾಪನೆ ಆಗುತ್ತಿದೆ. ಕಟ್ಟಡ ಈಗಾಗಲೇ ಪ್ರಾರಂಭವಾಗಿದೆ. ರಫ್ತಿನಲ್ಲಿ ಪ್ಯಾಕಿಂಗ್ ಉತ್ತಮ. ನಮ್ಮ ವಸ್ತುಗಳು ತಲುಪಬೇಕಾದ ಸ್ಥಳವನ್ನು ಕೆಡದಂತೆ ಸಕಾಲದಲ್ಲಿ ತಲುಪಬೇಕು. ರಪ್ತು ದೇಶದ ಆದಾಯವನ್ನು ಹೆಚ್ಚಿಸುತ್ತದೆ. ರಫ್ತಿನಲ್ಲಿ ಸಣ್ಣ ಕೈಗಾರಿಕೆಗಳ ಪಾಲು ಶೇಕಡಾ 45 ರಷ್ಟು ಇದೆ. ನೋಟು ಮುದ್ರಣವನ್ನು ಸಹ ಮೈಸೂರಿನಲ್ಲಿ ಮಾಡುತ್ತೇವೆ. ಮೈಸೂರು ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸಿ ಕೊಟ್ಟಿದೆ. ಸೆಮಿ ಕಂಡಕ್ಟರ್‌ಗಳ ಉತ್ಪಾದನಾ ಕೇಂದ್ರ ಸ್ಥಾಪನೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ. ಲಿಂಗರಾಜು ಮಾತನಾಡಿ, ಯಾವುದೇ ಪದಾರ್ಥವನ್ನು ನಾವು ರಪ್ತು ಮಾಡಲು ರಾಸಾಯನಿಕ ಮುಕ್ತವಾಗಿ ಇರಬೇಕು. ನಾವು ರಪ್ತು ಮಾಡುವ ಉತ್ಪಾದನೆ ಗುಣಮಟ್ಟದಿಂದ ಕೂಡಿರಬೇಕು. ಮೈಸೂರಿನಲ್ಲಿ ಈಗಾಗಲೇ ಸುಮಾರು 165 ಜನ ರಪ್ತು ಮಾಡುತ್ತಾ ಇದ್ದಾರೆ. ಇನ್ನು ಹೆಚ್ಚಿನ ಜನರು ದೇಶ ವಿದೇಶಕ್ಕೆ ರಪ್ತು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ರಪ್ತು ಮಾಹಿತಿ ಕೇಂದ್ರದ ಉಪ ನಿರ್ದೇಶಕರಾದ ಮೇಘಲಾ ಸೇರಿದಂತೆ ಕೈಗಾರಿಕೋದ್ಯಮಿಗಳು ಉಪಸ್ತಿತರಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…