Mysore
28
scattered clouds
Light
Dark

ಎನಿವೇರ್ ನೋಂದಣಿ ವ್ಯವಸ್ಥೆ ಜಿಲ್ಲಾ ಉಪನೋಂದಣಿ ಕಚೇರಿಗಳಿಗೆ ವಿಸ್ತರಣೆ

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: