ಮೈಸೂರು : ಮೈಸೂರು-ಬೆಳಗಾವಿ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರ ಮನವಿಗೆ ಫಲ ಸಿಕ್ಕಿದೆ. ಮೈಸೂರು ಮತ್ತು ಧಾರವಾಡ ನಿಲ್ದಾಗಳ ನಡುವೆ ಸಂಚರಿಸುತ್ತಿದ್ದ ದೈನಂದಿನ ಎಕ್ಸ್‌ಪ್ರೆಸ್ (17301/02) ರೈಲುಗಳನ್ನು ಬೆಳಗಾವಿ ನಿಲ್ದಾಣದವರೆಗೆ ವಿಸ್ತರಿಸಿ ರೈಲ್ವೆ ಸಚಿವಾಲಯವು ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 26 ರಿಂದ ಮೈಸೂರಿನಿಂದ ಬೆಳಗಾವಿವರೆಗೆ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ಮೈಸೂರು ಮತ್ತು ಬೆಳಗಾವಿ ನಡುವಿನ ಸಂಚಾರ ಮತ್ತಷ್ಟು ಸುಲಭವಾಗಲಿದೆ. ರಾಜ್ಯಸಭಾ ಸಂಸದ ಈರಣ್ಣ ಕರಡಿ ಅವರು ಈ ವಿಚಾರವನ್ನು ಮೊದಲೇ ತಿಳಿಸಿದ್ದರು, ಸೆಪ್ಟೆಂಬರ್ 19ರಂದು ಈ ಬಗ್ಗೆ ಅಧಿಕೃತ ಆದೇಶ ಬಂದಿದ್ದು, ರೈಲು ಸೇವೆಗೆ ಮುಹೂರ್ತ ನಿಗದಿಯಾಗಿದೆ.
ಇತ್ತೀಚೆಗೆ ಪ್ರಯಾಣಿಕರ ಬೇಡಿಕೆ, ವಿವಿಧ ಕಾರಣಗಳಿಗಾಗಿ ರೈಲು ಸಂಖ್ಯೆ 17302 ಧಾರವಾಡ-ಮೈಸೂರು ನಡುವಿನ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿತ್ತು. ಸೆಪ್ಟೆಂಬರ್ 26ರಿಂದಲೇ ಈ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.
ಈಗ ವೇಳಾಪಟ್ಟಿ ಬದಲಾವಣೆ ಜೊತೆಗೆ ಬೆಳಗಾವಿವರೆಗೆ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ನೀಡಲಿದೆ.
17301 ಸಂಖ್ಯೆಯ ರೈಲು ರಾತ್ರಿ 10.30ಕ್ಕೆ ಮೈಸೂರು ರೈಲು ನಿಲ್ದಾಣದಿಂದ ಹೊರಡಲಿದೆ. ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಅರಸೀಕೆರೆ, ಕಡೂರು, ಬೀರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ, ಯಲವಿಗಿ, ಹುಬ್ಬಳ್ಳಿ, ಧಾರವಾಡ ತಲುಪಲಿದೆ. ಸದ್ಯ ಬೆಳಗ್ಗೆ 8 ಗಂಟೆಗೆ ಧಾರವಾಡ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಸೆಪ್ಟೆಂಬರ್ 26ರಿಂದ ಬೆಳಗ್ಗೆ 7.38ಕ್ಕೆ ಧಾರವಾಡ ರೈಲು ನಿಲ್ದಾಣಕ್ಕೆ ಬರಲಿದೆ. 7.40ಕ್ಕೆ ಧಾರವಾಡದಿಂದ ಬೆಳಗಾವಿಗೆ ಹೊರಡಲಿದೆ. ಬೆಳಗ್ಗೆ 10.45 ಗಂಟೆಗೆ ಬೆಳಗಾವಿ ರೈಲು ನಿಲ್ದಾಣ ತಲುಪಲಿದೆ.
17302 ಸಂಖ್ಯೆಯ ರೈಲು ರಾತ್ರಿ 8 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.10 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು-ಬೆಳಗಾವಿ ರೈಲು ಓಡಾಟದಿಂದ ಎರಡೂ ಜಿಲ್ಲೆಗಳ ಪ್ರಯಾಣಿಕರಿಗೆ ಭಾರಿ ಅನುಕೂಲವಾಗಲಿದೆ. ಅಲ್ಲದೆ ಎರಡೂ ಜಿಲ್ಲೆಗಳ ಪ್ರವಾಸೋದ್ಯಮಕ್ಕೆ ಕೂಡ ಭಾರಿ ಉತ್ತೇಜನ ಸಿಕ್ಕಂತಾಗುತ್ತದೆ.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…