ಮೈಸೂರು

ಮೈಸೂರು ವಿ.ವಿ | ಅರ್ಹರಲ್ಲದವರಿಗೂ ಗೈಡ್‌ಶಿಪ್‌ : ಶಿಕ್ಷಣ ಮಂಡಳಿ ಸಭೆಯಲ್ಲಿ ಆಕ್ಷೇಪ

ಮೈಸೂರು : ಅರ್ಹರಲ್ಲದವರಿಗೂ ಗೈಡ್‌ಶಿಪ್ ಕೊಡುವುದಕ್ಕೆ ಮೈಸೂರು ವಿ.ವಿ ಶಿಕ್ಷಣ ಮಂಡಳಿ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಆಕ್ಷೇಪ ವ್ಯಕ್ತವಾಯಿತು.

ಮೈಸೂರು ವಿ.ವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಕಲಾ ನಿಕಾಯದ ಡೀನ್ ಪ್ರೊ.ಎಂ.ಎಸ್. ಶೇಖರ್ ಈ ವಿಚಾರವನ್ನು ಪ್ರಸ್ತಾಪಿಸಿದರು.

ಖಾಸಗಿ ಕಾಲೇಜುಗಳಿಂದ ಅರ್ಹರಲ್ಲದವರಿಗೂ ಗೈಡ್‌ಶಿಪ್ ಕೊಡುವಂತೆ ಮನವಿ ಪತ್ರಗಳು ಬರುತ್ತಿವೆ. ಯುಜಿಸಿ, ಸರ್ಕಾರ ಮತ್ತು ಬಿಒಎಸ್ ನಿಯಮಗಳು ಹಾಗೂ ಪ್ರೊಬೆಷನರಿ ಡಿಕ್ಲೇರ್ ಆಗಿರುವುದನ್ನು ಪರಿಶೀಲಿಸಿ ಗೈಡ್‌ಶಿಪ್ ಕೊಡಬೇಕು ಎಂದು ಪ್ರೊ.ಎಂ.ಎಸ್. ಶೇಖರ್ ಸಭೆಯ ಗಮನ ಸೆಳೆದರು.

ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅರ್ಹರಿದ್ದರೂ ಗೈಡ್‌ಶಿಪ್ ಕೊಡಲಾಗುತ್ತಿಲ್ಲ. ಆದರೆ, ಖಾಸಗಿ ಕಾಲೇಜುಗಳಿಂದ ಗೈಡ್‌ಶಿಪ್ ಅನ್ನು ಪರಿಗಣಿಸಲಾಗುತ್ತಿದೆ. ಈಚೆಗೆ ಗೈಡ್‌ಶಿಪ್ ಕೋರಿ ಮನವಿ ಬಂದಿದೆ. ನೌಕರಿ ಕಾಯಂ ಸೇರಿದಂತೆ ಯಾವುದೇ ದಾಖಲೆಗಳಿಲ್ಲ. ದಾಖಲೆಗಳನ್ನು ಕಳುಹಿಸುವಂತೆ ಪತ್ರ ಬರೆದರೆ, ನಮ್ಮನ್ನೇ ಪರಿಶೀಲಿಸುವಂತೆ ಮರು ಉತ್ತರ ಬಂದಿದೆ. ಆ ಹಿಂಬರಹಕ್ಕೆ ಯಾರದೇ ಸಹಿಯೂ ಇಲ್ಲ ಎಂದು ಪತ್ರವನ್ನು ಸಭೆಯಲ್ಲಿ ಪ್ರದರ್ಶಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅವರು, ಬಿಒಎಸ್ ಮತ್ತು ಯುಜಿಸಿ ನಿಯಾಮನುಸಾರ ಗೈಡ್‌ಶಿಪ್‌ಗೆ ಅನುಮತಿ ಕೊಡಬೇಕಾಗುತ್ತದೆ. ನೇಮಕಾತಿ ವಿಷಯವಾಗಿ ಸರ್ಕಾರದ ಹಂತದಲ್ಲಿ ಇತ್ಯರ್ಥವಾಗಬೇಕು. ಇದು ನಮ್ಮ ಸಮಸ್ಯೆ ಅಲ್ಲ ಎಂದು ಹೇಳಿದರು.

ಮೈಸೂರು ವಿ.ವಿ ಗುಣಮಟ್ಟದ ದೃಷ್ಟಿಯಿಂದ ಈ ವಿಷಯವನ್ನು ಪ್ರಸ್ತಾಪಿಸಿದೆ. ಹಿಂದೆ ವಾರ್ಷಿಕ ಸಭೆಯಲ್ಲಿ ಚರ್ಚೆ ಮಾಡಿ ಗೈಡ್‌ಶಿಪ್ ನೀಡಬಹುದು. ತಕ್ಷಣ ಗೈಡ್‌ಶಿಪ್ ಕೊಡಲು ತುರ್ತು ಏನಿರುತ್ತದೆ ಎಂದು ಪ್ರೊ.ಎಂ.ಎಸ್.ಶೇಖರ್ ಅವರು ಖಾರವಾಗಿ ಪ್ರಶ್ನಿಸಿದರು.

೨೦೧೭ರಲ್ಲಿ ಯುಜಿಸಿ ರೂಪಿಸಿರುವ ಗೈಡ್‌ಶಿಪ್ ಸಂಬಂಧಿತ ನಿಯಮಗಳನ್ನು ಪಾಲಿಸುವುದು. ಸಂಶೋಧನೆಗೆ ಉತ್ತೇಜನ ಕೊಡಲು ನಿಯಾಮನುಸಾರ ಗೈಡ್‌ಶಿಪ್ ಕೊಡಬಹುದು ಎಂಬ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಲಸಚಿವೆ ಎಂ.ಕೆ. ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ್, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

7 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

8 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

12 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

12 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

12 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

14 hours ago